ADVERTISEMENT

ಶಹಾಪುರ: ಸಿಲಿಂಡರ್ ಸ್ಫೋಟ; ಆಹಾರ ಸಾಮಾಗ್ರಿ ಭಸ್ಮ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 10:47 IST
Last Updated 2 ಆಗಸ್ಟ್ 2020, 10:47 IST
ಆಹಾರ ಸಾಮಗ್ರಿ ಹಾಗೂ ಇತರ ವಸ್ತುಗಳು ಭಸ್ಮವಾಗಿರುವ ದೃಶ್ಯ
ಆಹಾರ ಸಾಮಗ್ರಿ ಹಾಗೂ ಇತರ ವಸ್ತುಗಳು ಭಸ್ಮವಾಗಿರುವ ದೃಶ್ಯ    

ಶಹಾಪುರ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಚಾಮನಾಳ ಗ್ರಾಮದ ನಾಗಮ್ಮ ಎನ್ನುವವರ ಮನೆಯಲ್ಲಿ ಭಾನುವಾರ ಅಡುಗೆ ಸಿಲಿಂಡರ್ ಸ್ಫೋಟಗೊಂಡಿದೆ.

ಮನೆಯಲ್ಲಿದ್ದ ಆಹಾರ ಸಾಮಗ್ರಿ ಹಾಗೂ ಇತರ ವಸ್ತುಗಳು ಭಸ್ಮವಾಗಿವೆ. ಹಾನಿಯ ಮೌಲ್ಯ ಎರಡು ಲಕ್ಷ ಎಂದು ಅಂದಾಜಿಸಲಾಗಿದೆ.

ಸ್ಫೋಟದ ಸಂದರ್ಭದಲ್ಲಿ ಮನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗಮ್ಮಳ ತಾಯಿ ಭೀಮಮ್ಮಳಿಗೆ ಸಣ್ಣಪುಟ್ಟ ಗಾಯವಾಗಿವೆ. ಚಿಕಿತ್ಸೆಗಾಗಿ ಶಹಾಪುರ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಗೋಗಿ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.