ADVERTISEMENT

ಬಾಗಿಲು ತೆರೆಯದ ತೊಗರಿ ಖರೀದಿ ಕೇಂದ್ರಗಳು; ಆರೋಪ

​ಪ್ರಜಾವಾಣಿ ವಾರ್ತೆ
Published 6 ಜನವರಿ 2020, 10:42 IST
Last Updated 6 ಜನವರಿ 2020, 10:42 IST
ಯಲ್ಲಯ್ಯ ನಾಯಕ
ಯಲ್ಲಯ್ಯ ನಾಯಕ   

ಶಹಾಪುರ: ಜಿಲ್ಲೆಯಲ್ಲಿ 34 ತೊಗರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕುರ್ಮಾರಾವ್ ವಾರದ ಹಿಂದೆ ಪ್ರಕಟಣೆಯ ಮೂಲಕ ರೈತರಿಗೆ ತಿಳಿಸಿದ್ದರು. ಆದರೆ ಇಂದಿಗೂ ಜಿಲ್ಲೆಯಲ್ಲಿ ಖರೀದಿ ಕೇಂದ್ರವನ್ನು ಸ್ಥಾಪಿಸದೆ ರೈತರಿಗೆ ಅಧಿಕಾರಿಗಳು ವಂಚಿಸುತ್ತಿದ್ದಾರೆ ಎಂದು ಬಿಜೆಪಿಯ ರೈತ ಮೋರ್ಚಾದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯಲ್ಲಯ್ಯ ನಾಯಕ ವನದುರ್ಗ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿ ಕ್ವಿಂಟಾಲ್‌ಗೆ ₹6,100 ಹಾಗೂ ಪ್ರತಿ ರೈತರಿಂದ 5 ಕ್ವಿಂಟಾಲ್‌ನಂತೆ ಗರಿಷ್ಠ 10 ಕ್ವಿಂಟಾಲ್ ಖರೀದಿಸಲಾಗುವುದು. ಜ.10ವರೆಗೆ ಹೆಸರು ನೋಂದಾಯಿಸುವ ಪ್ರಕ್ರಿಯೆ ನಡೆಯಲಿದೆ. ರೈತರು ಬಾಂಧವರು ಹತ್ತಿರದ ತೊಗರಿ ಖರೀದಿ ಕೇಂದ್ರಕ್ಕೆ ತೆರಳಿ ಹೆಸರು ನೊಂದಾಯಿಸಿಕೊಳ್ಳಲು ಸೂಚಿಸಿದ್ದರು.

ಜಿಲ್ಲಾಧಿಕಾರಿಯ ಮಾತಿಗೆ ಬೆಲೆ ಕೊಟ್ಟು ರೈತರು ತಮ್ಮ ಕೆಲಸಗಳನ್ನು ಬದಿಗೊತ್ತಿ ಸಮೀಪದ ಖರೀದಿ ಕೇಂದ್ರಕ್ಕೆ ತೆರಳಿದರೆ ಅಲ್ಲಿನ ಸಿಬ್ಬಂದಿ ನಾಳೆ ಬಾ ಎಂಬ ಸಿದ್ಧ ಉತ್ತರ ನೀಡುತ್ತಿದ್ದಾರೆ. ಒಂದು ವಾರ ಕಳೆದಳೂ ನೊಂದಣಿ ಪ್ರಕ್ರಿಯೆ ಮಾತ್ರ ನಡೆದಿಲ್ಲ. ಇದು ಅಧಿಕಾರಿಗಳ ಬೇಜವಬ್ದಾರಿಯ ಪರಮಾಧಿಕಾರವಾಗಿದೆ ಎಂದು ಅವರು ಆರೋಪಿಸಿದರು.

ADVERTISEMENT

ನಮಗೆ ಇವತ್ತಿಗೂ ತೊಗರಿ ಖರೀದಿಸುವಂತೆ ಅಧಿಕೃತವಾಗಿ ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲ. ಇನ್ನೂ ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿಂದ ಸಮಸ್ಯೆ ಉಂಟಾಗಿದೆ. ಈಗ ರೈತರು ದಿನಾಲು ನಮ್ಮ ಕಚೇರಿಗೆ ಬಂದು ತೊಂದರೆ ಕೊಡುತಿದ್ದಾರೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿಯೊಬ್ಬರು ತಿಳಿಸಿದ್ದಾರೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.