ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯಿತಿ ಹಾಗೂ ನಗರಸಭೆ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 8ರಂದು ಜಿಲ್ಲಾ ಮಟ್ಟದ ದಸರಾ ಸಿ.ಎಂ. ಕಪ್ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬೆಳಿಗ್ಗೆ 10ಕ್ಕೆ ನಡೆಯುವ ಕ್ರೀಡಾಕೂಟದ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರು ಉದ್ಘಾಟಿಸುವರು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರು ಅವರ ಉಪಸ್ಥಿತಿ ಇರಲಿದೆ. ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಶಾಸಕರಾದ ಶರಣಗೌಡ ಕಂದಕೂರ, ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.