ADVERTISEMENT

ಯಾದಗಿರಿ: ಹತ್ತಿ ಖರೀದಿ ಕೇಂದ್ರಗಳಿಗೆ ಡಿಸಿ ಭೇಟಿ

ರೈತರಿಂದ ಹಣ ವಸೂಲಿ ಮಾಡುತ್ತಿರುವವ ವಿರುದ್ಧ ಪ್ರಕರಣ ದಾಖಲಿಸಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 4:00 IST
Last Updated 10 ನವೆಂಬರ್ 2020, 4:00 IST
ಯಾದಗಿರಿ ನಗರದ ಹತ್ತಿ ಖರೀದಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು
ಯಾದಗಿರಿ ನಗರದ ಹತ್ತಿ ಖರೀದಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು   

ಯಾದಗಿರಿ: ಹತ್ತಿ ಖರೀದಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಹತ್ತಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ ತೂಕ ಮತ್ತು ಅಳತೆಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳ ಆಧಾರದಲ್ಲಿ ಅವರು ಅನಿರೀಕ್ಷಿತವಾಗಿ ನಗರದ ವಿವಿಧ ಹತ್ತಿ ಖರೀದಿ ಕೇಂದ್ರಗಳಿಗೆ ತೆರಳಿ ಅಲ್ಲಿನ ವಸ್ತುಸ್ಥಿತಿ ಅವಲೋಕಿಸಿದರು.

ಮುಂಡರಗಿ ರಸ್ತೆಯ ಮೌಲಾಲಿ ಅನಪುರ್ ರೈಸ್ ಮಿಲ್ ಬಳಿಯಿರುವ ಹಾಗೂ ಇಂಪಿರಿಯಲ್ ಗಾರ್ಡನ್, ಯಾದಗಿರಿ ಬಸ್ ಘಟಕದ ಎದುರುಗಡೆ ಇರುವ ಹತ್ತಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಹತ್ತಿ ಖರೀದಿ ಕೇಂದ್ರಗಳಿಂದ ರೈತರಿಗೆ ನೀಡಲಾದ ಬಿಲ್‌ಗಳನ್ನ ಪರಿಶೀಲಿಸಿದರು.

ADVERTISEMENT

ಈ ವೇಳೆ ಅನಧಿಕೃತ ಕಡಿತಗಳ ಮೂಲಕ ರೈತರಿಂದ ಹಣ ವಸೂಲಿ ಮಾಡುತ್ತಿರುವ ಖರೀದಿದಾರರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಸ್ಥಳದಲ್ಲಿದ್ದ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ನಿರೀಕ್ಷಕ ಗಿರೀಶ್, ಗ್ರಾಮ ಲೆಕ್ಕಿಗ ಶ್ರೀಧರ್ ಬಡಿಗೇರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.