ADVERTISEMENT

ಯಾದಗಿರಿ: ಕೋವಿಡ್‌ನಿಂದ ಸ್ಟಾಫ್‌ ನರ್ಸ್‌ ಸಾವು

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 16:51 IST
Last Updated 1 ಅಕ್ಟೋಬರ್ 2020, 16:51 IST

ಯಾದಗಿರಿ: ಜಿಲ್ಲೆಯಲ್ಲಿ ಗುರುವಾರ ಕೋವಿಡ್ ಸೋಂಕಿಗೆ 32 ವರ್ಷದ ಸ್ಟಾಫ್‌ ನರ್ಸ್‌ ಒಬ್ಬರು ಕೋವಿಡ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಕಳೆದ 10 ವರ್ಷಗಳಿಂದ ತಾಲ್ಲೂಕಿನ ಕೌಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದದಾದಿಯೊಬ್ಬರುಸೋಂಕಿನಿಂದ ಸಾವಿಗೀಡಾಗಿದ್ದಾರೆ. ಮೂಲತಃ ಬೀದರ್‌ ಜಿಲ್ಲೆಯವರು.

ಕೆಲ ದಿನಗಳ ಹಿಂದೆ ದಂಪತಿಗೆ ಕೋವಿಡ್‌ ದೃಢಪಟ್ಟಿತ್ತು. ನಂತರ ಐದು ದಿನಗಳ ನಂತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.ಸೆಪ್ಟೆಂಬರ್ 29ರಂದು ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಾವನ್ನಪ್ಪಿದ್ದಾರೆ.

ADVERTISEMENT

ಸ್ಟಾಫ್‌ ನರ್ಸ್‌ ಸಾವಿಗೆ ಆರೋಗ್ಯ ಇಲಾಖೆ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಹಾಗೂಸೌಲಭ್ಯಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದರೊಂದಿಗೆ ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿದೆ.

159 ಮಂದಿಗೆ ಸೋಂಕು: ಜಿಲ್ಲೆಯಲ್ಲಿ ಹೊಸದಾಗಿ ಮತ್ತೆ 159 ಮಂದಿಗೆ ಸೋಂಕು ತಗುಲಿದ್ದು ಗುರುವಾರ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,589 ಮುಟ್ಟಿದೆ.

ಅದೇ ರೀತಿ 34 ಮಂದಿ ಗುಣಮುಖರಾಗಿದ್ದು, 7688 ಮಂದಿ ಗುಣಮುಖರಾದಂತೆ ಆಗಿದೆ. 848 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.