ADVERTISEMENT

ಅರ್ಥಪೂರ್ಣ ವಿಶ್ವಕರ್ಮ ಜಯಂತಿ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 17:02 IST
Last Updated 13 ಸೆಪ್ಟೆಂಬರ್ 2022, 17:02 IST
ಶರಣಬಸಪ್ಪ ಕೋಟೆಪ್ಪಗೊಳ
ಶರಣಬಸಪ್ಪ ಕೋಟೆಪ್ಪಗೊಳ   

ಯಾದಗಿರಿ: ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 17 ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಶ್ವಕರ್ಮ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಅಂದು ಮಧ್ಯಾಹ್ನ 1.30 ಗಂಟೆಗೆ ಜಿಲ್ಲಾಮಟ್ಟದ ವಿಶ್ವಕರ್ಮ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ಜವಾಬ್ದಾರಿಯಿಂದ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಜಯಂತಿಗೆ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು . ಎಲ್ಲಾ ತಾಲ್ಲೂಕು ಮಟ್ಟದಲ್ಲಿ ವಿವಿಧ ಕಚೇರಿಗಳಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಯಾ ಸಂಘಟನೆಗಳಿಂದ ಏರ್ಪಡಿಸಲಾಗುವ ಮೆರವಣಿಗೆ, ಮಾರ್ಗದ ಕುರಿತು ಪೂರ್ವಭಾವಿಯಾಗಿ ಸಂಬಂಧಿಸಿದ ಇಲಾಖೆಗೆ ತಿಳಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಎರಡು ಕಲಾತಂಡಗಳನ್ನು ಪೂರೈಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ವಿಶ್ವಕರ್ಮ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ವಿಶ್ವಕರ್ಮ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ ಚಂಡ್ರಕಿ, ಜಿಲ್ಲಾ ಉಪಾಧ್ಯಕ್ಷ ಶಿವಣ್ಣ, ವಿಶ್ವಕರ್ಮ, ಜಿಲ್ಲಾ ಸಮಾಜ ಮುಖಂಡ ದೇವಿಂದ್ರಪ್ಪ ಎಲ್. ವಡಿಗೇರ, ಜಿಲ್ಲಾ ಯುವ ಘಟಕ ಅಧ್ಯಕ್ಷ ಬಸವರಾಜ ಸೈದಾಪುರ, ಜಿಲ್ಲಾ ಕಾರ್ಯಧ್ಯಕ್ಷ ಬನಪ್ಪ ಕಾಳಬೆಳಗುಂದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಹತ್ತಿಕುಣಿ, ಜಿಲ್ಲಾ ಗೌರವಧ್ಯಕ್ಷ ಶೇಖರ ತಾತ, ಯಾದಗಿರಿ ನಗರ ಅಧ್ಯಕ್ಷ ಸಂಗಮೇಶ, ತಾಲ್ಲೂಕು ಅಧ್ಯಕ್ಷರು ಕಾಳಪ್ಪ ದುಪ್ಪಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.