ADVERTISEMENT

ಸರಳ ಕಲ್ಯಾಣ ಕರ್ನಾಟಕ ಉತ್ಸವ ಉತ್ಸವಕ್ಕೆ ನಿರ್ಧಾರ

ಉತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಮಾಹಿತಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2021, 16:44 IST
Last Updated 7 ಸೆಪ್ಟೆಂಬರ್ 2021, 16:44 IST
ಯಾದಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಮಾತನಾಡಿದರು
ಯಾದಗಿರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಮಾತನಾಡಿದರು   

ಯಾದಗಿರಿ: ಸೆ.17 ರಂದು ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಕೋವಿಡ್ ಕಾರಣದಿಂದ ಜಿಲ್ಲಾಡಳಿತ ವತಿಯಿಂದ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕುರಿತು ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಶಾಲಾ–ಕಾಲೇಜುಗಳಲ್ಲಿ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಗೆ ಜಿಲ್ಲಾಧಿಕಾರಿ ಸೂಚಿಸಿದರು.

ಕೋವಿಡ್ ಮೂರನೇ ಅಲೆ ಕಾರಣ ಸರಳ ಹಾಗೂ ಅರ್ಥಪೂರ್ಣವಾಗಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಕಲ್ಯಾಣ ಕರ್ನಾಟಕೋತ್ಸವನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿ, ಸಿಬ್ಬಂದಿ ಭಾಗವಹಿಸಬೇಕು ಎಂದು ಸೂಚಿಸಿದರು.

ಧ್ವಜಾರೋಹಣ ನಡೆಯುವ ಮೈದಾನದ ಸುತ್ತಲೂ ಅವಶ್ಯಕತೆ ಇದ್ದಲ್ಲಿ ಬ್ಯಾರಿಕೇಡಿಂಗ್, ದೀಪಾಲಂಕಾರ ವ್ಯವಸ್ಥೆ, ಶಿಷ್ಟಾಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ನೋಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಧ್ವಜಾರೋಹಣ ಕಾರಣ ರಾಷ್ಟ್ರಗೀತೆ, ನಾಡಗೀತೆ, ಧ್ವಜಾರೋಹಣ ಮತ್ತು ಇನ್ನಿತರ ಕುರಿತು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿ ಶಾಮಕದಳ ಸೇರಿದಂತೆ ಕವಾಯತು ತಂಡಗಳನ್ನು ರಚಿಸಬೇಕು ಎಂದು ಸೂಚಿಸಿದರು.

ಈ ವೇಳೆ ಜಿಲ್ಲಾ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸಲಾಂ ಹುಸೇನ್, ನಗರಸಭೆ ಆಯುಕ್ತ ಬಿ.ಟಿ. ನಾಯಕ, ಯಾದಗಿರಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.