ADVERTISEMENT

ಜಿಂಕೆ‌ ಬೇಟೆ; ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 4:40 IST
Last Updated 27 ಜೂನ್ 2022, 4:40 IST
ಗುರುಮಠಕಲ್ ತಾಲ್ಲೂಕಿನ ಯಲಸತ್ತಿ ಗ್ರಾಮದಲ್ಲಿ ಜಿಂಕೆ ಬೇಟೆಯಾದ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ
ಗುರುಮಠಕಲ್ ತಾಲ್ಲೂಕಿನ ಯಲಸತ್ತಿ ಗ್ರಾಮದಲ್ಲಿ ಜಿಂಕೆ ಬೇಟೆಯಾದ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ   

ಯಾದಗಿರಿ: ಜಿಂಕೆ‌ ಬೇಟೆಯಾಡಿದ ಮೂವರು ಆರೋಪಿಗಳನ್ನು ಯಾದಗಿರಿ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಗುರುಮಠಕಲ್ ತಾಲ್ಲೂಕಿನ‌ ಯಲಸತ್ತಿ ಗ್ರಾಮದ ಅಮೀರ್ ಖಾನ್, ನಾಗರೆಡ್ಡಿ ಹಾಗೂ ಹುಸೇನ್ ಬಂಧಿತ ಆರೋಪಿಗಳು. ಬಂಧಿತರಿಂದ ಜಿಂಕೆ ಮಾಂಸ ಜಪ್ತಿ ಮಾಡಲಾಗಿದೆ.

ಗುರುಮಠಕಲ್ ತಾಲ್ಲೂಕಿನ ಯಲಸತ್ತಿಯ ಅರಣ್ಯ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ಗ್ರಾಮದ ಆರೀಫ್ ಖಾನ್ ಅವರಿಗೆ ಸೇರಿದ್ದ ಮನೆಯಲ್ಲಿ ಮಾಂಸ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಅರಣ್ಯ ಉಪ ವಲಯಧಿಕಾರಿ ಚಂದ್ರಶಾ ನೇತೃತ್ವದಲ್ಲಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಅರಣ್ಯ ಅಧಿಕಾರಿಗಳು ಬಲೆ ಬಿಸಿದ್ದಾರೆ.

ADVERTISEMENT

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹ್ಮದ್ ಅಸದ್ ಅವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ಚಂದ್ರಶಾ ನೀರಕಟ್ಟಿ ಅವರ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.

ಸದ್ಯ ಮೂವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕೇಸ್ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.