ADVERTISEMENT

ವಡಗೇರಾ: ರಸ್ತೆ ಸಂಪರ್ಕ ಕಲ್ಪಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ಮೇ 2025, 14:15 IST
Last Updated 2 ಮೇ 2025, 14:15 IST
ಶರಣು ಜಡಿ
ಶರಣು ಜಡಿ   

ವಡಗೇರಾ: ‘ಪಟ್ಟಣದಿಂದ ಅನತಿ ದೂರದಲ್ಲಿ ಸೂರತ್–ಚೆನ್ನೈ ಭಾರತ್ ಮಾಲ್ ರಸ್ತೆ ನಿರ್ಮಾಣ ಹಂತದಲ್ಲಿದ್ದು, ತಾಲ್ಲೂಕು ಕೇಂದ್ರದಲ್ಲಿ ಹೆದ್ದಾರಿ ರಸ್ತೆ ನಿರ್ಮಿಸಬೇಕು’ ರಾಜ್ಯ ರೈತ ಸಂಘ ಹಸಿರು ಸೇನೆ ತಾಲ್ಲೂಕು ಗೌರವಾಧ್ಯಕ್ಷ ಶರಣು ಜಡಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು,‘ಖಾನಾಪುರ ಹಾಗೂ ಬೆಂಡೆಬೆಂಬಳಿ ಗ್ರಾಮಗಳಲ್ಲಿ ಭಾರತ್ ಮಾಲ್ ರಸ್ತೆ ಸಂಪರ್ಕ ಕಲ್ಪಿಸಿದ್ದಾರೆ. ನೂತನ ತಾಲ್ಲೂಕು ಕೇಂದ್ರ ವಡಗೇರಾ ಪಟ್ಟಣಕ್ಕೆ ರಸ್ತೆ ಸಂಪರ್ಕ ನೀಡದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರಿದೆ’ ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ವಡಗೇರಾ ತಾಲ್ಲೂಕು ಕೇಂದ್ರಕ್ಕೆ 64ಕ್ಕೂ ಹೆಚ್ಚು ಹಳ್ಳಿಗಳು ಒಳಪಡುತ್ತಿದ್ದು, ಈ ಭಾಗದ ಜನರು ರಸ್ತೆ ನಿರ್ಮಾಣಕ್ಕಾಗಿ ಜಮೀನು ಕೊಟ್ಟಿದ್ದಾರೆ. ಈಗ ಅವರಿಗೆ ತಮ್ಮ ಜಮೀನುಗಳಿಗಳಿಗೆ ಕೃಷಿ ಚಟುವಟಿಕೆಗಳಿಗಾಗಿ ಸಂಚರಿಸಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಸದರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಮೇಲೆ ಒತ್ತಡ ಹಾಕಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.