ವಡಗೇರಾ: ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣಗೊಂಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ರಾಜ್ಯ ರೈತ ಸಂಘ ಹಸಿರು ಸೇನೆ ವಾಸುದೇವ ಮೇಟಿ ಬಣದ ತಾಲ್ಲೂಕು ಅಧ್ಯಕ್ಷ ವಿದ್ಯಾಧರ ಜಾಕಾ ಆರೋಪಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಬೇಸಿಗೆ ಆರಂಭವಾಗಿದ್ದು 1 ಮತ್ತು 3ನೇ ವಾರ್ಡ್ ಸೇರಿ ಇನ್ನಿತರ ಬಡಾವಣೆಗಳಲ್ಲಿ ಸುಮಾರು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಕೋಟಿಗಟ್ಟಲೆ ಅನುದಾನ ಬಂದರೂ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಮಾತ್ರ ಹಾಗೆಯೇ ಇದೆ. ನಿತ್ಯ ಯುವಕರು ಹಾಗೂ ಮಕ್ಕಳು ಪಟ್ಟಣದಿಂದ ಸುಮಾರು 1 ಕಿ.ಮೀ ದೂರ ಇರುವ ಬೋರ್‌ವೆಲ್ ಹಾಗೂ ಮುಸ್ಲಿಂ ಸಮಾಜದ ಸ್ಮಶಾನದಲ್ಲಿರುವ ಬೋರ್‌ವೇಲ್‌ಗಳಿಂದ ಹಗಲು ರಾತ್ರಿ ಎನ್ನದೆ ಸೈಕಲ್ ಹಾಗೂ ದ್ವಿಚಕ್ರ ವಾಹನಗಳ ಮೇಲೆ ನೀರು ತರುವುದೇ ಕಾಯಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ಕೂಡಾ ಯಾವುದೇ ಪ್ರಯೋಜನವಾಗಿಲ್ಲ ಎಂದು ಅವರು ದೂರಿದ್ದಾರೆ.
ಮತಕ್ಷೇತ್ರದ ಶಾಸಕರು ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೆ ತರಬೇಕು. ಇದಕ್ಕೆ ಸ್ಪಂದಿಸದಿದ್ದರೆ ಗ್ರಾಮ ಪಂಚಾಯಿತಿಗೆ ರೈತ ಸಂಘದ ವತಿಯಿಂದ ಮತ್ತಿಗೆ ಹಾಕಲಾಗುವದು ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಸತೀಶ ಪೂಜಾರಿ, ಮಲ್ಲು ನಾಟೇಕಾರ, ಹಳ್ಳೆಪ್ಪ ತೇಜೇರ, ವೆಂಕಟೇಶ ಇಟಗಿ, ಬೀರಪ್ಪ ಜಡಿ, ನಿಂಗು ಕುರ್ಕಳಿ, ದರ್ಶನ ಗುತ್ತೇದಾರ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.