ADVERTISEMENT

ವಡಗೇರಾ: ಡಾ.ಅಜಯ್ ಸಿಂಗ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಮೇ 2025, 13:41 IST
Last Updated 22 ಮೇ 2025, 13:41 IST
ಸಂಜಿವ್ ಐರಡ್ಡಿ ಬೆಂಡೆಬೆಂಬಳಿ 
ಸಂಜಿವ್ ಐರಡ್ಡಿ ಬೆಂಡೆಬೆಂಬಳಿ    

ವಡಗೇರಾ: ಜೇವರ್ಗಿ ಮತಕ್ಷೇತ್ರದ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಂಜಿವ್ ಐರೆಡ್ಡಿ ಬೆಂಡೆಬೆಂಬಳಿ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ .

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಡಾ.ಅಜಯ್ ಸಿಂಗ್ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹಾಗೂ ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಿ ಜೇವರ್ಗಿ ಮತಕ್ಷೇತ್ರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹಲವು ಬಾರಿ ಶಾಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಿದ್ದೇ ಆದಲ್ಲಿ ಅಭಿವೃದ್ಧಿಗೆ ಪೂರಕವಾಗಲಿದೆ. ಆದ್ದರಿಂದ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಇವರ ಸೇವೆ ಗುರುತಿಸಿ ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT