ADVERTISEMENT

ದುರಸ್ತಿಯಾಗದ ಶುದ್ಧ ನೀರು ಘಟಕ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2020, 6:02 IST
Last Updated 8 ನವೆಂಬರ್ 2020, 6:02 IST
ಯರಗೊಳ ಸಮಿಪದ ಯಡ್ಡಳಿಯಲ್ಲಿರುವ ನೀರಿನ ಘಟಕ
ಯರಗೊಳ ಸಮಿಪದ ಯಡ್ಡಳಿಯಲ್ಲಿರುವ ನೀರಿನ ಘಟಕ   

ಯರಗೋಳ: ಬಂದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡ್ಡಳ್ಳಿ, ಚಾಮನಳ್ಳಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ.

ಯಡ್ಡಳ್ಳಿ ಗ್ರಾಮದಲ್ಲಿ 3,500 ಜನಸಂಖ್ಯೆ ಇದ್ದು, 6 ಜನ ಪಂಚಾಯಿತಿ ಸದಸ್ಯರು ಚುನಾಯಿತರಾಗಿದ್ದಾರೆ. 2 ವರ್ಷಗಳ ಹಿಂದೆ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು, ಅವು ದುರಸ್ತಿಯಾಗದ ಪರಿಣಾಮ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರು ಸಿಗದೆ ಪರದಾಡುವಂತಾಗಿದೆ.

‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀರಿನ ಘಟಕ ದುರಸ್ತಿ ಮಾಡಿಸುವಂತೆ ಹಲವು ಸಲ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಚಾಮನಳ್ಳಿ ಗ್ರಾಮದಲ್ಲಿ 2 ಸಾವಿರ ಜನಸಂಖ್ಯೆ ಇದ್ದು, 4 ಜನ ಗ್ರಾಮ ಪಂಚಾಯಿತಿ ಸದಸ್ಯರು ಚುನಾಯಿತರಾಗುತ್ತಾರೆ, ಗ್ರಾಮದಲ್ಲಿರುವ ನೀರು ಶುದ್ಧೀಕರಣ ಘಟಕ ಆರಂಭದಲ್ಲಿಯೇ ಕೆಟ್ಟು ಹೋಗಿ ದು ಇಲ್ಲಿಯವರೆಗು ದುರಸ್ತಿಯಾಗಿಲ್ಲ, ಅಧಿಕಾರಿಗಳಿಗೆ ಹಲವು ಸಲ ಮನವಿ ಮಾಡಿದರು ಪ್ರಯೋಜನವಾಗಿಲ್ಲ’ ಎಂಬುದು ಗ್ರಾಮಸ್ಥರ ಆರೋಪ.

‘ಗ್ರಾಮದಲ್ಲಿ 3 ದಶಕಗಳ ಹಿಂದೆ ನಿರ್ಮಾಣವಾಗಿದ್ದ ಕುಡಿಯುವ ನೀರು ಸಂಗ್ರಹ ಟ್ಯಾಂಕ್ ಸಂಪೂರ್ಣ ಶಿಥಿಲಗೊಂಡಿದ್ದು, ಇಂದೋ ನಾಳೆ ಕುಸಿದು ಬೀಳುವ ಹಂತ ತಲುಪಿದೆ’ ಎಂದು ಗ್ರಾಮಸ್ಥರು ಆರೋಪಿಸಿದರು.

ಅಶುದ್ಧ ನೀರು ಕುಡಿಯುವುದರಿಂದ ಹೊಟ್ಟೆಯಲ್ಲಿ ಸಣ್ಣ ಪ್ರಮಾಣದ ಕಲ್ಲುಗಳಾಗುತ್ತಿವೆ, ಗ್ರಾಮದಲ್ಲಿನ ಶುದ್ಧೀಕರಣ ಘಟಕಗಳು ದುರಸ್ತಿ ಮಾಡಿಸುವಂತೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.