ADVERTISEMENT

ಸುರಪುರ: ‘ಕೃಷಿ ಕಾಯ್ದೆ ತಿದ್ದುಪಡಿ ಹಿಂಪಡೆಯಿರಿ’

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 3:38 IST
Last Updated 10 ಆಗಸ್ಟ್ 2021, 3:38 IST
ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸುರಪುರದಲ್ಲಿ ಸೋಮವಾರ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಶಾಸಕ ರಾಜೂಗೌಡರಿಗೆ ಮನವಿ ಸಲ್ಲಿಸಿದರು
ನೂತನ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸುರಪುರದಲ್ಲಿ ಸೋಮವಾರ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿ ಶಾಸಕ ರಾಜೂಗೌಡರಿಗೆ ಮನವಿ ಸಲ್ಲಿಸಿದರು   

ಸುರಪುರ:ಕೇಂದ್ರ ಸರ್ಕಾರ ಕೃಷಿ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ವಿವಿಧ ಸಂಘಟನೆಗಳ ಮುಖಂಡರು ಗಾಂಧಿ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಿಐಟಿಯು ತಾಲ್ಲೂಕು ಘಟಕದ ಅಧ್ಯಕ್ಷೆ ಬಸಮ್ಮ ಆಲ್ಹಾಳ ಮಾತನಾಡಿ, ‘ಕೃಷಿ ಕ್ಷೇತ್ರವನ್ನು ಕಬಳಿಸಲು ಕಾರ್ಪೋರೇಟ್ ಸಂಸ್ಥೆಗಳು ಹೊಂಚು ಹಾಕುತ್ತಿವೆ. ಇದಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿದೆ’ ಎಂದು ದೂರಿದರು.

‘ರೈತರ ಉತ್ಪನ್ನಗಳನ್ನು ಖರೀದಿಸುವ ಕಂಪನಿಗಳು ರೈತರೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು. ಉತ್ತಮ ಬೆಲೆ ನೀಡಲು ಖರೀದಿದಾರ ಕಂಪನಿಗಳು ನಿರಾಕರಿಸಿದರೆ ರೈತರಿಗೆ ರಕ್ಷಣೆಯಿಲ್ಲ. ಆದ್ದರಿಂದ ರೈತ ವಿರೋಧ ಕಾನೂನುಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ADVERTISEMENT

ಶಾಸಕ ರಾಜೂಗೌಡ ಮತ್ತು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ ಮನವಿ ಸಲ್ಲಿಸಿದರು.

ರಾಧಾ ಲಕ್ಷ್ಮೀಪುರ, ಸುರೇಖಾ ಕುಲಕರ್ಣಿ, ಶಹಾಜೀದಿ ಬೇಗಂ, ಪ್ರಕಾಶ ಆಲ್ಹಾಳ, ಮರೆಮ್ಮ ಕಕ್ಕೇರಿ, ಶರಣಬಸವ ಜಂಬಲದಿನ್ನಿ, ಧರ್ಮಣ್ಣ ದೊರಿ, ಮಲ್ಲನಗೌಡ, ಖಾಜಾಸಾಬ್ ದಳಪತಿ, ಸಿದ್ಧಮ್ಮ ಬೋನ್ಹಾಳ, ಮುತ್ತಮ್ಮ, ಸೆಂಟರ್ ಇಂಡಿಯಾ ಟ್ರೇಡ್ ಯುನಿಯನ್, ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ದಲಿತ ಹಕ್ಕುಗಳ ಸಮಿತಿ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.