ADVERTISEMENT

ಅಪರಿಚಚಿತ ವ್ಯಕ್ತಿಯ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 16:05 IST
Last Updated 19 ಆಗಸ್ಟ್ 2020, 16:05 IST

ಹುಣಸಗಿ: ತಾಲ್ಲೂಕಿನ ಕೊಡೇಕಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಜುಮಾಲಪುರ ದೊಡ್ಡ ತಾಂಡಾ ಬಳಿ ಕೃಷ್ಣಾ ನದಿಯ ದಂಡೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೈ ಹಾಗೂ ಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಯಸ್ಸುಅಂದಾಜು 30 ರಿಂದ 35 ವರ್ಷ. ಸಾಧಾರಣ ಮೈಕಟ್ಟು. ಜೀನ್ಸ್‌ ಪ್ಯಾಂಟ್, ಕಂದು ನೀಲಿ ಬಣ್ಣದ ಟಿ ಶರ್ಟ್‌ ಧರಿಸಿದ್ದು, ಕೊಡೇಕಲ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಹಿತಿಗೆ 9480803584 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT