ADVERTISEMENT

ಅಭಿವೃದ್ದಿಗೆ ಒತ್ತು: ಶಾಸಕ ಮುದ್ನಾಳ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 8:10 IST
Last Updated 9 ಜುಲೈ 2020, 8:10 IST
ಯಾದಗಿರಿ ತಾಲ್ಲೂಕಿನ ಮೈಲಾಪೂರದಲ್ಲಿ ಬುಧವಾರದಂದು ಪ್ರವಾಸೋದ್ಯಮ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಶಂಕುಸ್ಥಾಪನೆ ನೆರವೇರಿಸಿದರು.
ಯಾದಗಿರಿ ತಾಲ್ಲೂಕಿನ ಮೈಲಾಪೂರದಲ್ಲಿ ಬುಧವಾರದಂದು ಪ್ರವಾಸೋದ್ಯಮ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ಶಂಕುಸ್ಥಾಪನೆ ನೆರವೇರಿಸಿದರು.   

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಭಕ್ತರನ್ನು ಹೊಂದಿದ ಯಾದಗಿರಿ ತಾಲ್ಲೂಕಿನ ‘ಮೈಲಾಪುರ ಮಲ್ಲಯ್ಯ’ ಕ್ಷೇತ್ರದ ಅಭಿವೃದ್ದಿಗೆ ಒತ್ತು ನೀಡಲಾಗುವುದು ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.

ಬುಧವಾರ ತಾಲ್ಲೂಕಿನ ಮೈಲಾಪುರದಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ಲೊಕೋಪಯೋಗಿ ಇಲಾಖೆಯಿಂದ ₹1 ಕೋಟಿ ವೆಚ್ಚದ ಯಾತ್ರಿ ನಿವಾಸ ಹಾಗೂ ರಸ್ತೆ, ಚರಂಡಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ನಾವು ಮೊದಲು ಇಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡುತ್ತಿದ್ದೇವೆ ಎಂದು ತಿಳಿಸಿದರು.

ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ರಾಚನಗೌಡ ಮುದ್ನಾಳ, ಜಿಪಂ ಸದಸ್ಯ ಅಮರದೀಪ್ ನಾಯಕ್, ಯುಡಾ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಎಇಇ ವಿಶ್ವನಾಥರಡ್ಡಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.