ADVERTISEMENT

ಎಸಿಬಿ ಬಲೆಗೆ ಡಿಎಚ್‌ಒ ಡಾ.ಎಂ.ಎಸ್‌.ಪಾಟೀಲ

ಡಿಎಚ್‌ಒ ಮನೆಯಿಂದ ₹10.62 ಲಕ್ಷ ಹಣ, ಚಿನ್ನಾಭರಣ ವಶ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 9:16 IST
Last Updated 12 ಆಗಸ್ಟ್ 2020, 9:16 IST
ಡಾ.ಎಂ.ಎಸ್‌.ಪಾಟೀಲ, ಡಿಎಚ್‌ಒ
ಡಾ.ಎಂ.ಎಸ್‌.ಪಾಟೀಲ, ಡಿಎಚ್‌ಒ   

ಯಾದಗಿರಿ:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್.ಪಾಟೀಲ ಹಾಗೂಜಿಲ್ಲಾ ಕುಟುಂಬ ಯೋಜನಾಧಿಕಾರಿ ಸಿದ್ದನಗೌಡ ಬಸನಗೌಡ ಪಾಟೀಲ ಎಸಿಬಿ ಬಲೆಗೆ ಬಿದ್ದಿದ್ದಾರೆ.

‘ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನರ್ಸ್‌ ಹುದ್ದೆಗೆ ನೇಮಕ ಮಾಡಿಕೊಳ್ಳಲು ಮಂಗಳವಾರ ಇವರು ತಮ್ಮ ಕಚೇರಿಯಲ್ಲಿ ₹25 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ, ಇಬ್ಬರನ್ನೂ ಬಂಧಿಸಲಾಗಿದೆ’ ಎಂದುಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

₹10.62 ಲಕ್ಷ ಹಣ, ಚಿನ್ನಾಭರಣ ವಶ:

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್.ಪಾಟೀಲ ಸರ್ಕಾರಿ ವಸತಿ ಗೃಹದ ಮನೆಯಿಂದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ₹10.62 ಲಕ್ಷ ಹಣ, ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿವರೆಗೆ ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.