ADVERTISEMENT

ಡಿಜಿಟಲ್‌ ಗ್ರಂಥಾಲಯ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2020, 10:08 IST
Last Updated 8 ಮಾರ್ಚ್ 2020, 10:08 IST
ಜಿಲ್ಲಾ ಕೇಂದ್ರ ಗ್ರಂಥಾಲಯದ ಮೊದಲನೇ ಮಹಡಿ ಮತ್ತು ಡಿಜಿಟಲ್ ಗ್ರಂಥಾಲಯ ಹಾಗೂ ಪುಸ್ತಕ ಪ್ರದರ್ಶನವನ್ನು ‌ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್ ಶನಿವಾರ ಉದ್ಘಾಟಿಸಿದರು
ಜಿಲ್ಲಾ ಕೇಂದ್ರ ಗ್ರಂಥಾಲಯದ ಮೊದಲನೇ ಮಹಡಿ ಮತ್ತು ಡಿಜಿಟಲ್ ಗ್ರಂಥಾಲಯ ಹಾಗೂ ಪುಸ್ತಕ ಪ್ರದರ್ಶನವನ್ನು ‌ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್ ಶನಿವಾರ ಉದ್ಘಾಟಿಸಿದರು   

ಯಾದಗಿರಿ: ನಗರದ ಅಮರ ಲೇ ಔಟ್‍ನಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದ ಮೊದಲನೇ ಮಹಡಿ ಮತ್ತು ಡಿಜಿಟಲ್ ಗ್ರಂಥಾಲಯ ಹಾಗೂ ಪುಸ್ತಕ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್ ಶನಿವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಅಭ್ಯರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ವರದಾನವಾಗಿದೆ.
ಈ ಗ್ರಂಥಾಲಯದಲ್ಲಿ 1 ಲಕ್ಷಕ್ಕೂ ಹೆಚ್ಚು ಪುಸ್ತಕಗಳಿದ್ದು, ಅದರಲ್ಲೂ ಮಹಾನ್ ವ್ಯಕ್ತಿಗಳಾದ ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧೀಜಿ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಅನೇಕ ಮಹನೀಯರ ಕುರಿತ ಪುಸ್ತಕಗಳಿವೆ. ಇವುಗಳನ್ನು ಓದಿ ನೀವು ಕೂಡ ಮಹಾನ್ ವ್ಯಕ್ತಿಗಳಾಗಬೇಕು ಎಂದು ಕರೆ ನೀಡಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶಕುಮಾರ ಎಸ್.ಹೊಸಮನಿ ಪ್ರಸ್ತಾವಿಕ ಮಾತನಾಡಿ, ರಾಜ್ಯದಲ್ಲಿ 7 ಸಾವಿರ ಗ್ರಂಥಾಲಯಗಳಿದ್ದು, ರಾಜ್ಯವೂ ದೇಶದಲ್ಲೆ ಅತೀ ಹೆಚ್ಚು ಗ್ರಂಥಾಲಯಗಳನ್ನು ಹೊಂದಿದ ರಾಜ್ಯವಾಗಿದೆ. ಮಾದರಿ ಗ್ರಂಥಾಲಯಗಳ ರಾಜ್ಯ ಎಂದು ಇತ್ತೀಚೆಗೆ ದೆಹಲಿಯಲ್ಲಿ ನಡೆದ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜಿಲ್ಲೆಯಲ್ಲಿ ₹45 ಲಕ್ಷ ವೆಚ್ಚದಲ್ಲಿ ಕೆಆರ್‌ಐಡಿಎಲ್‌ನಿಂದ ನಿರ್ಮಾಣವಾದ ಮೊದಲ ಮಹಡಿ ಗ್ರಂಥಾಲಯ ಕಟ್ಟಡವು ಸುಸಜ್ಜಿತವಾಗಿದ್ದು, ಓದುಗರು ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು.

ADVERTISEMENT

ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಎಂ.ಎಸ್.ರೆಬಿನಾಳ ಉಪಸ್ಥಿತರಿದ್ದರು. ಗ್ರಂಥಪಾಲಕ ಪರಮೇಶ್ವರ ಮದರಗಿ, ಇಲಾಖೆ ಸಿಬ್ಬಂದಿ ಹಾಜರಿದ್ದರು. ಪರಿಮಳ ದೀಕ್ಷಿತ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.