ADVERTISEMENT

ಯಾದಗಿರಿ | ‘ಕ್ರೀಡಾ ಸ್ಫೂರ್ತಿ ಮೆರೆದ ಅಂಗವಿಕಲರು’

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 6:04 IST
Last Updated 19 ನವೆಂಬರ್ 2025, 6:04 IST
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ಅಂಗವಿಕಲರು
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ಅಂಗವಿಕಲರು   

ಯಾದಗಿರಿ: ‘ಜಿಲ್ಲೆಯ ಅಂಗವಿಕಲರು ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಸ್ಪೂರ್ತಿಯನ್ನು ತೋರಿದ್ದಾರೆ’ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶರಣಪ್ಪ ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಯೋಜಿಸಿದ್ದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿತ್ತು. ಅದರಲ್ಲಿ ಹಲವರು ಅಂಗವಿಕಲರು ಉತ್ಸಾಹದಿಂದ ಪಾಲ್ಗೊಂಡು ಸಂತೋಷ ವ್ಯಕ್ತಪಡಿಸಿದ್ದಾರೆ’ ಎಂದರು.

ADVERTISEMENT

ಈ ಸಂದರ್ಭದಲ್ಲಿ ವಿಶ್ವಜ್ಯೋತಿ ವಿದ್ಯಾಸಂಸ್ಥೆ ಅಧ್ಯಕ್ಷ ಸುಭಾಷ್ ರಾಂಪುರಕರ್, ಜಿಲ್ಲಾ ಸರ್ಕಾರಿ ಅಂಗವಿಕಲರ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಶರಣಪ್ಪ ಕೊತ್ವಾಲ್, ವಿಕಲಚೇತನರ ಒಕ್ಕೂಟದ ವಿಭಾಗೀಯ ಅಧ್ಯಕ್ಷ ಸಂಗನಗೌಡ ಧನರೆಡ್ಡಿ, ಶಹಾಪುರ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಸಾಹೇಬ್ ಜಾನಿ ಸೇರಿ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.