ಶಹಾಪುರ: ತಾಲ್ಲೂಕಿನ ನಡಿಹಾಳ ಗ್ರಾಮದ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ರಸಗೊಬ್ಬರ ಹಾಗೂ ಕ್ರಿಮಿನಾಶಕವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾರಾಟ ಜಾಲದ ಹಿಂದಿನ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕು ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚೆನ್ನಪ್ಪ ಆನೆಗೊಂದಿ ಈಶಾನ್ಯ ವಲಯದ ಐಜಿಪಿ ಅವರಿಗೆ ಮನವಿ ಮಾಡಿದ್ದಾರೆ.
ತಾಲ್ಲೂಕಿನಲ್ಲಿ ಪೊಲೀಸ್ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ನಕಲಿ ರಸಗೊಬ್ಬರ ಹಾಗೂ ಕ್ರಿಮಿನಾಶಕ ಮಾರಾಟ ಮಾಡುವ ಜಾಲ ತಾಲ್ಲೂಕಿನಲ್ಲಿ ಬೇರೂರಿದೆ. ಗೋಗಿ ಠಾಣೆ ಪೊಲೀಸರು ದೂರು ದಾಖಲಿಸಿಕೊಳ್ಳಲು ಮೀನಾಮೇಷ ಎಣಿಸಿ ಕೊನೆಗೆ ಲಾರಿ ಚಾಲಕನನ್ನು ಬಂಧಿಸಿ ಕೈ ತೊಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಯಿಸಿ ಹಣ ವಸೂಲಿ ಮಾಡುವ ಕೆಲಸವನ್ನು ಪೊಲೀಸರು ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ನಕಲಿ ರಸಗೊಬ್ಬರ ಹಾಗೂ ಕ್ರಿಮಿನಾಶಕ ಮಾರಾಟ ದಂಧೆಯಲ್ಲಿ ತೊಡಗಿದ ವ್ಯಕ್ತಿಗಳನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.