ADVERTISEMENT

ಯಾದಗಿರಿ: ನ.24ರಿಂದ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2023, 15:47 IST
Last Updated 23 ನವೆಂಬರ್ 2023, 15:47 IST
<div class="paragraphs"><p>ಶರಣಬಸಪ್ಪ ದರ್ಶನಾಪುರ</p></div>

ಶರಣಬಸಪ್ಪ ದರ್ಶನಾಪುರ

   

ಯಾದಗಿರಿ: ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ನ.24, 25 ಮತ್ತು 27ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ನ.24ರ ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ರಾಯಚೂರು ರಸ್ತೆ ಮೂಲಕ ಹೊರಟು ಮಧ್ಯಾಹ್ನ 2 ಗಂಟೆಗೆ ಶಹಾಪುರಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆ ನಡೆಸುವರು. ನ.25ರ ಶನಿವಾರ ಬೆಳಿಗ್ಗೆ 10.30 ಗಂಟೆಗೆ ಸುರಪುರ ತಾಲ್ಲೂಕು ಮಲ್ಲಾ ಬಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ADVERTISEMENT

ಮಧ್ಯಾಹ್ನ 12 ಗಂಟೆಗೆ ದೇವದುರ್ಗ ಕ್ರಾಸ್ ಹತ್ತಿರ ಹತ್ತಿಗುಡೂರುನಲ್ಲಿ ಕನ್ನಡ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ಶಹಾಪುರದ ಹಳಿಸಗರದಲ್ಲಿರುವ ಮಾಗನಗೇರಾ ಮಠದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ನ.27ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಶಹಾಪುರದ ಅರಬೋಳ ಕಲ್ಯಾಣ ಮಂಟಪದಲ್ಲಿ ಜನತಾದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.