ADVERTISEMENT

ಯಾದಗಿರಿ | ಕೌಶಲಾಭಿವೃದ್ಧಿ ಚಟುವಟಿಕೆ ಚುರುಕುಗೊಳಿಸಿ

ಜಿಲ್ಲಾ ಕೌಶಲ ಮಿಷನ್ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2022, 11:19 IST
Last Updated 4 ಫೆಬ್ರುವರಿ 2022, 11:19 IST
ಡಾ. ರಾಗಪ್ರಿಯಾ ಆರ್.
ಡಾ. ರಾಗಪ್ರಿಯಾ ಆರ್.   

ಯಾದಗಿರಿ: ‘ಉದ್ಯೋಗ ಬಯಸಿ ಜಿಲ್ಲೆಯ ಯುವಕ ಯುವತಿಯರು ಬೇರೆ ಬೇರೆ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ. ಅಂತವರನ್ನು ಗುರುತಿಸಿ ಜಿಲ್ಲೆಯಲ್ಲಿರುವ ಕೈಗಾರಿಗಳಲ್ಲಿನ ಬೇಡಿಕೆ ಆಧಾರದ ಮೇಲೆ, ಕೌಶಲಾ ತರಬೇತಿಗಳನ್ನು ನೀಡಿ ಉದ್ಯೋಗ ಕಲ್ಪಿಸಿಕೊಡಬೇಕು’ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸೂಚಿಸಿದರು.

ಕಚೇರಿಯ ಸಭಾಂಗಣದಲ್ಲಿ ಗುರುವಾರ ಜರುಗಿದ ಜಿಲ್ಲಾ ಕೌಶಲ ಮಿಷನ್ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದಿಂದ ಈಗಾಗಲೇ ಕೃಷಿ ಇಲಾಖೆಯಡಿಯಲ್ಲಿ ವಿವಿಧ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿರುತ್ತದೆ . ಅಂತಹ ಫಲಾನುಭವಿಗಳಿಗೆ ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆಯ ಸಹಯೊಗದೊಂದಿಗೆ ತರಬೇತಿಗಳನ್ನು ನೀಡಲು ಕ್ರಮ ಕೈಗೊಳ್ಳಬೇಕೆಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ADVERTISEMENT

ಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಸುಮಾರು ಕಂಪನಿಗಳು ಪ್ರಾರಂಭವಾಗಿವೆ. ಅಲ್ಲಿ ಆಯಾ ಕಂಪನಿಗಳಿಗೆಸಂಬಂಧಿಸಿದಂತೆ ಮಾನವ ಸಂಪನ್ಮೂಲದ ಅವಶ್ಯಕತೆ ಇರುತ್ತದೆ. ಕೈಗಾರಿಕಾ ಆಧಾರಿತ ತರಬೇತಿಗಳನ್ನು ಗುರುತಿಸಿ, ಜಿಲ್ಲಾ ಕೌಶಲ ಮಿಷನ್ ವತಿಯಿಂದ ತರಬೇತಿಗಳನ್ನು ನೀಡಿದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಉದ್ಯೋಗ ಒದಗಿಸಿಕೊಡುವಲ್ಲಿ ಉಪಯೋಗವಾಗುತ್ತದೆ. ಸ್ಥಳೀಯ ಕೈಗಾರಿಕಾಧಾರಿತ ಬೇಡಿಕೆಯನ್ನು ಗುರುತಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವ ಸಹಾಯ ಸಂಘಗಳನ್ನು ರಚಿಸಲಾಗಿದ್ದು, ಅದರಲ್ಲಿ ಸ್ವಯಮ ಉದ್ಯೋಗ ಮಾಡಲು ಹಲವಾರು ಜನ ಮಹಿಳೆಯರು ಅರ್ಹರಿದ್ದಾರೆ. ಅಂತಹವನ್ನು ಗುರುತಿಸಿ ಕೃಷಿ ಇಲಾಖೆಯಡಿಲ್ಲಿ ಪ್ರಸ್ತುತ ಇರುವ ಯೋಜನೆಗಳಿಗೆ ಸಂಬಂಧಿಸಿದಂತೆ ತರಬೇತಿಯನ್ನು ನೀಡಲು ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ನಿರುದ್ಯೋಗ ಯುವಕ- ಯುವತಿಯರನ್ನು ಗುರುತಿಸಿ ಅಂಕಿ ಅಂಶಗಳನ್ನು ಸಂಗ್ರಹಿಸಿ ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ ಸಲ್ಲಿಸಲು ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಕೌಶಲ ಮಿಷನ್ ಅಡಿಯಲ್ಲಿ ಸರ್ಕಾರದಿಂದ ರಚಿಸಲಾದ ಉಪ ಸಮಿತಿಗಳ ಜವಾಬ್ದಾರಿಗಳು ಹಾಗೂ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು, ಹಾಗೂ ಮುಂದಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪ ಸಮಿತಿಯ ಅಧ್ಯಕ್ಷರು ವರದಿ ಸಲ್ಲಿಸಲು ಎಲ್ಲಾ ಉಪ ಸಮಿತಿಯಅಧ್ಯಕ್ಷರುಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಡೇ-ನಲ್ಮ್ ಯೋಜನೆಯಡಿ ಎಲ್ಲಾ ಉಪಘಟಕಗಳಲ್ಲಿ ಸರ್ಕಾರದಿಂದ ನಿಗಧಿಪಡಿಸಲಾದ ಗುರಿಗಳಿಗೆ ಅನುಗುಣವಾಗಿ ಪ್ರಗತಿ ಸಾಧಿಸಲು ಪೌರಾಯುಕ್ತರುಹಾಗೂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಪ್ರಧಾನ ಮಂತ್ರಿ ಆತ್ಮ್ ನಿರ್ಭರ್ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲಸೌಲಭ್ಯ ಒದಗಿಸಿಕೊಡುವಲ್ಲಿ ಪ್ರಗತಿ ಸಾಧಿಸಬೇಕೆಂದು ಜಿಲ್ಲಾ ಲೀಡ್ ಬ್ಯಾಂಕ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಕೌಶಲಾಭಿವೃದ್ದಿ ಅಧಿಕಾರಿ ರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಶೋಕ ತೋಟದ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕಿ ರೇಖಾ ಮ್ಯಾಗೇರಿ, ಕೃಷಿ ಇಲಾಖೆ ಅಧಿಕಾರಿ ಅಭಿದ್ ಎಸ್ ಎಸ್, ಡಿಡಿಪಿಯು ಚಂದ್ರಕಾಂತ ಹಿಳ್ಳಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅಜಿತ್ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.