ADVERTISEMENT

ಯಾದಗಿರಿ: ಭವ್ಯಕಾಶಿ ದಿವ್ಯ ಕಾಶಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 14:26 IST
Last Updated 11 ಡಿಸೆಂಬರ್ 2021, 14:26 IST
ಅಮರನಾಥ ಪಾಟೀಲ
ಅಮರನಾಥ ಪಾಟೀಲ   

ಯಾದಗಿರಿ: ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಧಾಮ ಪುನರುಜ್ಜೀವ ಪಡೆದುಕೊಂಡಿದ್ದು, ಡಿಸೆಂಬರ್ 13ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರವನ್ನು ನೇರಪ್ರಸಾರದಲ್ಲಿ ಪ್ರಚುರ ಪಡಿಸಲಾಗುವುದು ಎಂದು ‘ದಿವ್ಯ ಕಾಶಿ ಭವ್ಯ ಕಾಶಿ’ ಕರ್ನಾಟಕ ಸಹ ಸಂಚಾಲಕ ಅಮರನಾಥ ಪಾಟೀಲ ಹೇಳಿದರು.

ಒಂದು ತಿಂಗಳ ಕಾಲ ದೇಶಾದ್ಯಂತ ಈ ಕಾರ್ಯಕ್ರಮ ನಡೆಯಲಿದೆ. ಡಿ.13ರಿಂದ ಜನವರಿ 14ರ ಮಕರ ಸಂಕ್ರಾಂತಿಯಂದು ಮುಕ್ತಾಯವಾಗಲಿದೆ ಎಂದು ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸೋಮವಾರ ಎಲ್ಲ ಜ್ಯೋತಿರ್ಲಿಂಗಗಳಲ್ಲಿ ಸಮಾರಂಭ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಗಳನ್ನು ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯ 6 ಮಂಡಲಗಳ, 43 ಶ‌ಕ್ತಿ ಕೇಂದ್ರಗಳಲ್ಲಿ ಕಾರ್ಯಕ್ರಮ ಪ್ರಸಾರ ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ಇದರ ಅಂಗವಾಗಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಡಿ.17ರಂದು ಮೇಯರ್‌ಗಳ ಸಮ್ಮೇಳನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಉತ್ತರ ಪ್ರದೇಶ ಚುನಾವಣಾ ಗಿಮಿಕ್‌ಗಾಗಿ ಈ ಕಾರ್ಯಕ್ರಮ ಮಾಡುತ್ತಿಲ್ಲ. ಇದೊಂದು ಧಾರ್ಮಿಕ ಕಾರ್ಯಕ್ರಮವಾಗಿದೆ ಎಂದು ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಶರಣಭೂಪಾಲರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಗುರು ಕಾಮಾ, ದೇವೇಂದ್ರನಾಥ್ ನಾಥ್, ಮಹಿಳಾ ಮೋರ್ಚಾ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನಪುರ, ಸಂಚಾಲಕ ಮಲ್ಲಿಕಾರ್ಜುನ್ ಕಂದಕೂರ್, ನಗರ ಅಧ್ಯಕ್ಷ ಸುರೇಶ ಅಂಬಿಗೇರ್, ಶೇಖರ್ ದೊರೆ, ಮೌನೇಶ್ ಬೆಳೆಗೆರೆ, ದೇವೇಂದ್ರಪ್ಪ ಕೊಂಚಾಡಿ, ಸುನಿತಾ ಚವಾಣ್ ಹನುಮಂತ ವಲ್ಲ್ಯಾಪುರ, ಶಂಕರ್ ಸೋನಾರ, ಮಾಧ್ಯಮ ಸಹ ಸಂಚಾಲಕ ಚಂದ್ರಶೇಖರ್ ಕಡೆಸುರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.