ADVERTISEMENT

ಶಹಾಪುರ | ‘ದೋರನಹಳ್ಳಿಗೆ ಕಾಲೇಜು ಮಂಜೂರಾತಿಗೆ ಮನವಿ’

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 6:17 IST
Last Updated 11 ಅಕ್ಟೋಬರ್ 2025, 6:17 IST
10ಎಸ್ಎಚ್ ಪಿ 2: ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಕನ್ಯಾ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪಿಸುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಬೆಂಗಳೂರಿನಲ್ಲಿ ಭೇಟಿಯಾಗಿ ಸಚಿವ ಮಧು ಬಂಗಾರಪ್ಪ ಮನವಿ ಸಲ್ಲಿಸಿದರು
10ಎಸ್ಎಚ್ ಪಿ 2: ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಕನ್ಯಾ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪಿಸುವಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಬೆಂಗಳೂರಿನಲ್ಲಿ ಭೇಟಿಯಾಗಿ ಸಚಿವ ಮಧು ಬಂಗಾರಪ್ಪ ಮನವಿ ಸಲ್ಲಿಸಿದರು   

ಶಹಾಪುರ: ತಾಲ್ಲೂಕಿನ ದೊಡ್ಡ ಹೋಬಳಿ ಕೇಂದ್ರವಾಗಿರುವ ದೋರನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಕನ್ಯಾ ಪ್ರೌಢಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಸ್ಥಾಪಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಮುಖಂಡರ ನಿಯೋಗವು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.

ಗ್ರಾಮೀಣ ಪ್ರದೇಶದಲ್ಲಿನ ಮಕ್ಕಳ ಕಲಿಕೆಗೆ ಅನುಕೂಲವಾಗುತ್ತದೆ. ಅಲ್ಲದೆ ಕನ್ಯಾ ಪ್ರೌಢಶಾಲೆ ಸ್ಥಾಪನೆಯಿಂದ ವಿದ್ಯಾರ್ಥಿನಿಯರು ತಮ್ಮ ವ್ಯಾಸಂಗ ಮುಂದುವರೆಸಲು ಸಹಕಾರಿಯಾಗಲಿದೆ ಎಂದು ನಿಯೋಗದಲ್ಲಿದ್ದ ಮುಖಂಡ ನಿಜಗುಣ ಪೂಜಾರಿ ತಿಳಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡ ರಮೇಶ ದೊರೆ ಆಲ್ದಾಳ, ಭಂಡಾರಿ ನಾಟೇಕರ್, ತಾಯಪ್ಪ ಯಾದವ ನಿಯೋಗದಲ್ಲಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.