ADVERTISEMENT

ಉಲ್ಟಾ ಹಾರಿದ ತ್ರಿವರ್ಣ ಧ್ವಜ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 16:23 IST
Last Updated 4 ಅಕ್ಟೋಬರ್ 2020, 16:23 IST
ವಡಗೇರಾ ತಾಲ್ಲೂಕಿನ ಕಾಡಂಗೇರಾ ಬಿ ಗ್ರಾಮ ಪಂಚಾಯಿತಿಯ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಲಾಗಿತ್ತು
ವಡಗೇರಾ ತಾಲ್ಲೂಕಿನ ಕಾಡಂಗೇರಾ ಬಿ ಗ್ರಾಮ ಪಂಚಾಯಿತಿಯ ಕಚೇರಿ ಮೇಲೆ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಲಾಗಿತ್ತು   

ವಡಗೇರಾ: ತಾಲ್ಲೂಕಿನ ಕಾಡಂಗೇರಾ ಬಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ನಡೆದಿದೆ. ರಾಷ್ಟ್ರಧ್ವಜ ತುಂಬಾ ಹಳೆಯದಾಗಿದ್ದು, ಬಣ್ಣಗಳು ಮಾಸಿ ಹೋಗಿವೆ. ಇಷ್ಟಾದರೂ ಅದೇ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ.

ಭಾನುವಾರ ಬೆಳಿಗ್ಗೆ 6 ಗಂಟೆಗೆ ತ್ರಿವರ್ಣ ಧ್ವಜವನ್ನು ಉಲ್ಟಾ ಹಾರಿಸಲಾಗಿದೆ. ಅದನ್ನು ಹಾಗೆ ಬಿಟ್ಟು ಮಧ್ಯಾಹ್ನ 3 ಗಂಟೆಗೆ ಸರಿಪಡಿಸಿದ್ದಾರೆ.

‘ಉಲ್ಟಾ ಧ್ವಜಾರೋಹಣ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ನಮ್ಮ ಪಂಚಾಯಿತಿ ಸಿಬ್ಬಂದಿಗೆ ಸಭೆಯಲ್ಲಿ ಈ ಬಗ್ಗೆ ಎಚ್ಚರಿಸುತ್ತೇನೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಹೊಸ ಧ್ವಜವನ್ನು ಖರೀದಿಸಿದ್ದೇವೆ. ಆದರೂ ಯಾಕೆ ಹಳೆಯ ಧ್ವಜವನ್ನು ಹಾರಿಸಿದ್ದಾರೆ ಎಂದು ವಿಚಾರಿಸುತ್ತೇನೆ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಣಮಂತ ನಾಯಕ ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.