ADVERTISEMENT

ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ

ವಾರ್ತಾ ಇಲಾಖೆಯಿಂದ ಮೈಲಾರಲಿಂಗೇಶ್ವರ ಜಾತ್ರೆಯಲ್ಲಿ ಮಳಿಗೆ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2020, 10:34 IST
Last Updated 15 ಜನವರಿ 2020, 10:34 IST
ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ ವೀಕ್ಷಿಸಿದರು
ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ ವೀಕ್ಷಿಸಿದರು   

ಯಾದಗಿರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ತಾಲ್ಲೂಕಿನ ಮೈಲಾಪುರದ ಮೈಲಾರಲಿಂಗೇಶ್ವರ ಜಾತ್ರೆಯ ವಿಶೇಷ ಬಸ್ ನಿಲ್ದಾಣ ಆವರಣದಲ್ಲಿ ಸ್ಥಾಪಿಸಿದ ಛಾಯಾಚಿತ್ರ ಪ್ರದರ್ಶನ ಮಳಿಗೆಯನ್ನು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ ಮಂಗಳವಾರ ಉದ್ಘಾಟಿಸಿದರು.

ಮೈಲಾರಲಿಂಗೇಶ್ವರ ಜಾತ್ರೆಯ ಅಂಗವಾಗಿ ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳು ಮತ್ತು ಸಾಧನೆಗಳನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮೂರು ದಿನಗಳವರೆಗೆ ಪ್ರದರ್ಶನ ಮಳಿಗೆ ಸ್ಥಾಪಿಸಿರುವುದು ಸಾರ್ವಜನಿಕರಿಗೆ ತುಂಬಾ ಅನುಕೂಲವಾಗಲಿದೆ. ಭಕ್ತರು, ಸಾರ್ವಜನಿಕರು ಸರ್ಕಾರದ ಯೋಜನೆಗಳ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರದರ್ಶನದಲ್ಲಿರುವ ವಿವರ:

ADVERTISEMENT

ಪ್ರವಾಹದಲ್ಲಿ ತೊಂದರೆಗೊಳಗಾದ ಕುಟುಂಬಗಳಿಗೆ ತಲಾ ₹10,000 ಪರಿಹಾರ, ಜೀವಹಾನಿ ಕುಟುಂಬಗಳಿಗೆ ತಲಾ ₹5 ಲಕ್ಷ ಮತ್ತು ಅಸುನೀಗಿದ ಜಾನುವಾರುಗಳಿಗೆ ₹16 ರಿಂದ 30 ಸಾವಿರ ಪರಿಹಾರ ನೀಡಲಾಗಿರುವ ಛಾಯಾಚಿತ್ರ. ಸಂಪರ್ಕ ಕಳೆದುಕೊಂಡಿದ್ದ 178 ರಸ್ತೆ, ಸೇತುವೆಗಳ ಪೈಕಿ 142 ರಸ್ತೆ, ಸೇತುವೆ ಸಂಪರ್ಕಗಳ ಪುನರ್ ಸ್ಥಾಪನೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಕಾಮಗಾರಿ ಕೈಗೊಳ್ಳಲು ₹1500 ಕೋಟಿ ರೂ. ಬಿಡುಗಡೆ ಮಾಡಿರುವ ಕುರಿತು ಸೇರಿದಂತೆ ವಿವಿಧ ಸರ್ಕಾರ ಯೋಜನೆಗಳು ಇದರಲ್ಲಿವೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ರವಿರಾಜ್ ಎಚ್.ಜಿ., ವಾರ್ತಾ ಸಹಾಯಕ ಡಿ.ಕೆ.ರಾಜರತ್ನ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಬಿ.ಎ.ಕೃಷ್ಣ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ಆರೋಗ್ಯ ಮೇಲ್ವಿಚಾರಕ ಸತ್ಯನಾರಾಯಣ, ವಾರ್ತಾ ಇಲಾಖೆಯ ಸಿಬ್ಬಂದಿಗಳಾದ ವಿಶ್ವರಾಧ್ಯ ಎಸ್.ಹಂಗನಳ್ಳಿ, ಬಸಪ್ಪ ನಾಟೇಕಾರ, ಸಿದ್ದು ಎಸ್.ಲಾಡ್ಲಾಪುರ, ಹೈಯ್ಯಾಳಪ್ಪ ಸೇರಿದಂತೆ ಸಾರ್ವಜನಿಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.