ADVERTISEMENT

ಸಂಚಾರ ಪರೀಕ್ಷಾ ವಾಹನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 16:07 IST
Last Updated 4 ಆಗಸ್ಟ್ 2020, 16:07 IST
ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸಂಚಾರಿ ಗಂಟಲು ದ್ರವ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಂಗಳವಾರ ಹಸಿರು ನಿಶಾನೆ ತೋರಿಸಿದರು
ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸಂಚಾರಿ ಗಂಟಲು ದ್ರವ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಂಗಳವಾರ ಹಸಿರು ನಿಶಾನೆ ತೋರಿಸಿದರು   

ಯಾದಗಿರಿ: ಸಂಚಾರಿ ಗಂಟಲು ದ್ರವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭುಚವ್ಹಾಣ್ಅವರು ಮಂಗಳವಾರ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸಿದರು.

ನಂತರ ಮಾತಾಡಿದ ಅವರು, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀತ, ಕೆಮ್ಮು, ಜ್ವರ ಸೇರಿದಂತೆ ಕೊರೊನಾ ಲಕ್ಷಣ ಕಂಡು ಬಂದಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿಕೊಳ್ಳಬೇಕು. ಗಂಟಲು ದ್ರವ ಪಡೆಯಲು ಸಂಚಾರಿ ಗಂಟಲು ದ್ರವ ಪರೀಕ್ಷಾ ವಾಹನ ಬರಲಿದ್ದು, ಸಾರ್ವಜನಿಕರು ಪರೀಕ್ಷೆ ಮಾಡಿಕೊಂಡು ಪಾಸಿಟಿವ್ ಬಂದರೆ ವೈದ್ಯಕೀಯ ಸೇವೆ ಪಡೆದು ಗುಣಮುಖರಾಗಬೇಕು ಎಂದು ಹೇಳಿದರು.

ಶಾಸಕರಾದ ವೆಂಕಟರಡ್ಡಿಗೌಡ ಮುದ್ನಾಳ, ರಾಜೂಗೌಡ, ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್‌ ಸೋನಾವಣೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎಸ್‌.ಪಾಟೀಲ
ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.