ADVERTISEMENT

ಅಂಗವಿಕಲರ ಬೈಕ್ ರ‌್ಯಾಲಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2024, 16:09 IST
Last Updated 29 ಫೆಬ್ರುವರಿ 2024, 16:09 IST

ಯಾದಗಿರಿ: ಲೋಕಸಭಾ ಚುನಾವಣೆ ನಿಮಿತ್ತ ಮತದಾನದ ಬಗ್ಗೆ ಅರಿವು ಮೂಡಿಸಲು ಅಂಗವಿಕಲರ ಬೈಕ್ ರ‍್ಯಾಲಿ ಜಾಥಾಕ್ಕೆ ಗುರುವಾರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ, ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪಂವಾರ್‌ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಎಪಿಡಿ ಸಂಸ್ಥೆ ಹಾಗೂ ಅಂಗವಿಕಲರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸಂಘ–ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲು ಅಂಗವಿಕಲರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, ನಗರ ಪುನರ್ವಸತಿ ಕಾರ್ಯಕರ್ತರು, ತಾಲ್ಲೂಕು ವಿವಿದ್ಧೋದ್ದೇಶ ಪುನರ್ವಸತಿ ಕಾರ್ಯಕರ್ತರಿಗಾಗಿ ಜಾಥಾ ಅಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಪಿಒ ಗುರುನಾಥ ಗೌಡಪ್ಪನ್ನೋರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶರಣಗೌಡ ಪಾಟೀಲ, ಸಿಬ್ಬಂದಿ ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.