ADVERTISEMENT

ಯಾದಗಿರಿ | ಅಭಿವೃದ್ಧಿ ಕಾರ್ಯಕ್ರಮ ಜನರಿಗೆ ತಿಳಿಸಿ: ಶಾಸಕ ವೆಂಕಟರಡ್ಡಿ ಮುದ್ನಾಳ

ಯಾದಗಿರಿ ಗ್ರಾಮೀಣ ಮಂಡಲ ಕಾರ್ಯಕಾರಣಿ; ಮುದ್ನಾಳ ಸಲಹೆ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 5:51 IST
Last Updated 3 ಡಿಸೆಂಬರ್ 2022, 5:51 IST
ಯಾದಗಿರಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಗ್ರಾಮೀಣ ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿದರು
ಯಾದಗಿರಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಗ್ರಾಮೀಣ ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿದರು   

ಯಾದಗಿರಿ: ನಾನು ಶಾಸಕನಾದ ಮೇಲೆ ಹತ್ತು ವರ್ಷದಿಂದ ಆಗದ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಿದ್ದೇನೆ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಯಾದಗಿರಿ ಗ್ರಾಮೀಣ ಮಂಡಲ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಯಕಾರಣಿ ಸಭೆ ತುಂಬಾ ಮಹತ್ವವಾಗಿದ್ದು, ಜವಾಬ್ದಾರಿ ತೆಗೆದುಕೊಂಡ ಎಲ್ಲಾ ಪದಾಧಿಕಾರಿಗಳು ಕಾರ್ಯಕಾರಣಿ ಸಭೆಗೆ ತಪ್ಪದೆ ಭಾಗವಹಿಸಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ಮಾತನಾಡಿ,ಬಿಜೆಪಿ ಪಕ್ಷ ಈ ಮಟ್ಟಕ್ಕೆ ಬೆಳೆಯಲು ಕಾರ್ಯಕರ್ತರ ದೊಡ್ಡ ಪಡೆ ಇದೆ. ಈ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ ಪದಾಧಿಕಾರಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸುವಲ್ಲಿ ನೀವು ಮುಂಚೂಣಿಯಲ್ಲಿರಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಬಿನ್ನಾಡಿ ಸಂಘಟನಾತ್ಮಕ ಅವಧಿ ತೆಗೆದುಕೊಂಡು ಇದರ ಜತೆಗೆ ನರೇಂದ್ರ ಮೋದಿ ಅವರ 8ವರ್ಷದ ಸಾಧನೆಗಳ ಜನರಿಗೆ ತಿಳಿಸಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ದೇವೀಂದ್ರನಾಥ ನಾದ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೋರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟರಡ್ಡಿ ಅಬ್ಬೆತುಮಕೂರ, ಗುರು ಕಾಮ, ನೀಲಕಂಠರಾಯ ಏಲ್ಹೇರಿ, ಸಿದ್ದನಗೌಡ ಕಾಡಂನೊರ, ಪರುಶುರಾಮ ಕುರಕುಂದಿ ಸೇರಿದಂತೆ ಸದಸ್ಯರು, ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪ್ರಕೋಷ್ಟ ಸಂಚಾಲಕರು ಇದ್ದರು. ಗೋವಿಂದಪ್ಪ ಖಾನಾಪುರ ನಿರೂಪಿಸಿದರು. ಶಿವು ಕೊಂಕಲ್ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.