ADVERTISEMENT

ಗಿರಿಜಮ್ಮ ಅವಿರೋಧ ಆಯ್ಕೆ

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2019, 15:41 IST
Last Updated 23 ಜನವರಿ 2019, 15:41 IST
ಯಾದಗಿರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಉಪಾಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ಗಿರಿಜಮ್ಮ ಸದಾಶಿವಪ್ಪ ಅವರನ್ನು ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್ ಅಭಿನಂದಿಸಿದರು
ಯಾದಗಿರಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಉಪಾಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಗೊಂಡ ಗಿರಿಜಮ್ಮ ಸದಾಶಿವಪ್ಪ ಅವರನ್ನು ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್ ಅಭಿನಂದಿಸಿದರು   

ಯಾದಗಿರಿ: ಜಿಲ್ಲಾ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಗಿರಿಜಮ್ಮ ಸದಾಶಿವಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಿದ್ದು, ಬುಧವಾರ ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್ ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಗಿರಿಜಮ್ಮ ಸದಾಶಿವಪ್ಪ ಅವರು ಮಾತ್ರ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದರು.

ಪರಿಶೀಲನೆ ವೇಳೆ ಎರಡೂ ಕ್ರಮಬದ್ಧವಾಗಿದ್ದವು. ನಾಮಪತ್ರ ಹಿಂಪಡೆಯಲು ಎರಡು ನಿಮಿಷ ಕಾಲಾವಕಾಶ ನೀಡಲಾಯಿತು. ಉಮೇದುವಾರಿಕೆ ವಾಪಸ್ ಪಡೆಯಲಿಲ್ಲವಾದ್ದರಿಂದ ಚುನಾವಣೆ ನಡೆಸದೆ, ಗಿರಿಜಮ್ಮ ಸದಾಶಿವಪ್ಪ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಲಾಯಿತು.

ADVERTISEMENT

ಜಿಲ್ಲಾ ಪಂಚಾಯಿತಿ 15 ಸದಸ್ಯರು ಹಾಜರಿದ್ದರು. 9 ಮಂದಿ ಸದಸ್ಯರು ಗೈರಾಗಿದ್ದರು. ನೂತನ ಉಪಾಧ್ಯಕ್ಷರನ್ನು ಗಿರಿಜಮ್ಮ ಸದಾಶಿವಪ್ಪ ಅವರನ್ನು ಪ್ರಾದೇಶಿಕ ಆಯುಕ್ತ ಸುಭೋದ್ ಯಾದವ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.