ADVERTISEMENT

ದೇಶಿ ಕ್ರೀಡೆಗೆ ಪ್ರೋತ್ಸಾಹ ನೀಡಿ: ಪಿಡಿಒ ರಾಜು ಮೇಟಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 4:27 IST
Last Updated 26 ನವೆಂಬರ್ 2022, 4:27 IST
ಕ್ರೀಡೆಯಲ್ಲಿ ಭಾಗವಹಿಸಿ ವಿಜೇತವಾದ ತಂಡಗಳಿಗೆ ವರ್ಕನಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನ ವಿತರಿಸಿ ಪ್ರಶಸ್ತಿ ಪತ್ರ ನೀಡಲಾಯಿತು
ಕ್ರೀಡೆಯಲ್ಲಿ ಭಾಗವಹಿಸಿ ವಿಜೇತವಾದ ತಂಡಗಳಿಗೆ ವರ್ಕನಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನ ವಿತರಿಸಿ ಪ್ರಶಸ್ತಿ ಪತ್ರ ನೀಡಲಾಯಿತು   

ಯಾದಗಿರಿ: ಆಧುನಿಕತೆಯ ಭರಾಟೆಯಲ್ಲಿ ಅಳಿವಿನಂಚಿನಲ್ಲಿರುವ ಗ್ರಾಮೀಣ ಭಾಗದ ಸೋಗಡಿನ ದೇಶಿಯ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದು ಅವಶ್ಯ ಎಂದು ವರ್ಕನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ಮೇಟಿ ಹೇಳಿದರು.

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ವರ್ಕನಳ್ಳಿ ವತಿಯಿಂದ ಆಯೋಜಿಸಿದ್ದ ಕಬಡ್ಡಿ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ಯುವಕರು, ಯುವತಿಯರು ಮುಂದಿನ ಪೀಳಿಗೆಗೆ ಇಂತಹ ಕ್ರೀಡೆಗಳು ಜೀವಂತ ಉಳಿವಿಗಾಗಿ ಶ್ರಮಿಸಬೇಕು ಎಂದರು.

ADVERTISEMENT

ಪಂಚಾಯಿತಿ ವ್ಯಾಪ್ತಿಯ ಕೂಯಿಲೂರು, ಪಗಲಾಪುರ, ಎಂ.ಹೊಸ್ಸಳ್ಳಿ, ಮುಷ್ಟೂರು ಗ್ರಾಮಗಳಿಂದ ಯುವಕರು ಮತ್ತು ಯುವತಿಯರು ಬಂದು ಈ ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸಿದ್ದರು.

ಕ್ರೀಡೆಯಲ್ಲಿ ಭಾಗವಹಿಸಿ ವಿಜೇತವಾದ ತಂಡಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಬಹುಮಾನ ವಿತರಿಸಿ ಪ್ರಶಸ್ತಿ ಪತ್ರ ನೀಡಲಾಯಿತು.

ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾ ಭೀಮರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶರಣಪ್ಪ ಬಳಿಚಕ್ರ, ಸದಸ್ಯರಾದ ಹಣಮಂತ, ಮಲ್ಲಿಕಾರ್ಜುನ ಕಂಟಗನೋರ, ಗ್ರಾಮದ ಹಿರಿಯರಾದ ಮಾರೆಪ್ಪ ಗಾಲೀಮ್ ಸಾಬ್, ಭೀಮರೆಡ್ಡಿ ಪೊಲೀಸ್ ಪಾಟೀಲ, ಬಸವರಾಜ ಗೌಡಗೇರ, ಮಲ್ಲಯ್ಯ ಸ್ವಾಮಿ, ರಾಜೇಶ್ವರಿ, ಮಲ್ಲಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.