ADVERTISEMENT

ಯಾದಗಿರಿ: ಕರ್ತವ್ಯ ಲೋಪ– ಇಬ್ಬರು ಕೆಆರ್‌ಐಡಿಎಲ್ ಎಂಜಿನಿಯರ್‌ಗಳು ಅಮಾನತು

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 6:36 IST
Last Updated 2 ಜನವರಿ 2026, 6:36 IST
<div class="paragraphs"><p> ಹೈಕೋರ್ಟ್ ಆದೇಶ</p></div>

ಹೈಕೋರ್ಟ್ ಆದೇಶ

   

ಯಾದಗಿರಿ: ನಗರದ ಮುಖ್ಯ ರಸ್ತೆಗಳ ವಿಭಜಕಗಳ ನಡುವೆ ಅಳವಡಿಸಿರುವ ಎಲ್‌ಇಡಿ ಲೈಟ್ ಹಾಗೂ ಸ್ವೀಪ್‌ ಲೈಟ್‌ಗಳ ಕಾಮಗಾರಿಯಲ್ಲಿ ಮಾರ್ಗಸೂಚಿಯನ್ನು ಪಾಲಿಸದ ಆರೋಪದಡಿ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್‌ಐಡಿಎಲ್) ಇಬ್ಬರು ಎಂಜಿನಿಯರ್‌ಗಳನ್ನು ಅಮಾನತು ಮಾಡಲಾಗಿದೆ.

ಕೆಆರ್‌ಐಡಿಎಲ್‌ನ ಕಾರ್ಯಪಾಲಕ ಎಂಜಿನಿಯರ್ ಆರ್.ಧನಂಜಯ್ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಜ್ ಅವರ ವಿರುದ್ಧ ಇಲಾಖೆಯ ವಿಚಾರಣೆಯನ್ನು ಕಾಯ್ದಿರಿಸಿ, ಅಮಾನತು ಮಾಡಲಾಗಿದೆ ಎಂದು ಕೆಆರ್‌ಐಡಿಎಲ್‌ನ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ರಸ್ತೆ ವಿಭಜಕ ನಡುವಿನ ಎಲ್‌ಇಡಿ ಲೈಟ್ ಹಾಗೂ ಸ್ವೀಪ್‌ ಲೈಟ್‌ಗಳ ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕೃಷ್ಣಾ ಅಚ್ಚುಕಟ್ಟು ಭೂಮಿ ಉಳಿಸಿ ಹೋರಾಟ ಸಮಿತಿ ಕಾರ್ಯದರ್ಶಿ ಅಶೋಕ್ ಮಲ್ಲಾಬಾದಿ ಅವರು ಸಹ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.