ADVERTISEMENT

ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಆಗದಂತೆ ನೋಡಿಕೊಳ್ಳಿ: ಯಾದಗಿರಿ ಡಿಸಿ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2024, 15:57 IST
Last Updated 26 ಮಾರ್ಚ್ 2024, 15:57 IST

ಯಾದಗಿರಿ: ಜಿಲ್ಲೆಯಲ್ಲಿ ತೀವ್ರ ಬರ ಇರುವ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಮಾತನಾಡಿ, ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿರುವ ಕಡೆಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ನೀರನ್ನು ಪ್ರಥಮ ಆದ್ಯತೆ ಮೇಲೆ ಪಡೆದು ನೀರು ಕಲ್ಪಿಸಬೇಕು. ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವ ಜೊತೆ ಸಕಾಲಕ್ಕೆ ಬಿಲ್ಲು ಪಾವತಿಯಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಜಿಲ್ಲೆಯ ನಾರಾಯಣಪುರ ಜಲಾಶಯ, ಭೀಮಾ ನದಿ, ನೀರು ಅನಧಿಕೃತವಾಗಿ ಪಂಪ್‌ಸೆಟ್‌ಗಳ ಮೂಲಕ ನೀರು ಪಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ರಚಿಸಲಾಗಿರುವ ತಂಡಗಳು ತೀವ್ರ ನಿಗಾ ಇಡುವಂತೆ ಸೂಚಿಸಿದ ಅವರು ಜನ, ಜಾನುವಾರುಗಳಿಗೆ ಕುಡಿಯಲು ನೀರು ಹಾಗೂ ಮೇವಿನ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.

ADVERTISEMENT

ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ.ರಾಜು ದೇಶಮುಖ ಮಾತನಾಡಿ, 47 ವಾರಗಳ ಕಾಲ ಉಪಯೋಗವಾಗುವಷ್ಟು ಮೇವಿನ ಲಭ್ಯತೆ ಇದೆ ಎಂದು ಸಭೆಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.