ADVERTISEMENT

ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2020, 16:45 IST
Last Updated 18 ನವೆಂಬರ್ 2020, 16:45 IST
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಯಾದಗಿರಿ ಜಿಲ್ಲೆಯ ನಿಯೋಗ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿದರು
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಯಾದಗಿರಿ ಜಿಲ್ಲೆಯ ನಿಯೋಗ ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದಿಸಿದರು   

ಯಾದಗಿರಿ: ವೀರಶೈವ ಲಿಂಗಾಯತಅಭಿವೃದ್ಧಿ ನಿಗಮ ಸ್ಥಾಪಿಸಿದಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಜಿಲ್ಲೆಯ ನಿಯೋಗ ಭೇಟಿ ಮಾಡಿ ಅಭಿನಂದಿಸಿದರು.

ಬಹುದಿನದ ಬೇಡಿಕೆಯಾದ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಮುಖ್ಯಮಂತ್ರಿ ಅಸ್ತಿತ್ವಕ್ಕೆ ತಂದಿರುವುದು ಸ್ವಾಗತಾರ್ಹ ಎಂದು ಮಾಜಿ ಸಚಿವ ಡಾ.ಎ.ಬಿ ಮಾಲಕರೆಡ್ಡಿ,ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರ ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನಿವಾಸಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ. ಪಾಟೀಲ, ಮಾಜಿ ಸಚಿವ ಡಾ. ಎ.ಬಿ ಮಾಲಕರೆಡ್ಡಿ, ರಾಜ್ಯ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಬಾಬುರಾವ ಚಿಂಚನಸೂರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ರಾಜ್ಯ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಶೇಖರಗೌಡ ಮಾಗನೂರ, ಮುಖಂಡರ ನಿಯೋಗ ಭೇಟಿಯಾಗಿ ಅವರನ್ನು ಅಭಿನಂದಿಸಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು.

ADVERTISEMENT

ಇದೇ ವೇಳೆ ನಿಗಮಕ್ಕೆ ನೂರು ಕೋಟಿ ಅನುದಾನವನ್ನು ಮೀಸಲಿಡಬೇಕೆಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.