ಯಾದಗಿರಿ: ಸೆಪ್ಟೆಂಬರ್ 14 ರಿಂದ 15ರ ವರೆಗೆ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ (ಆರ್‌ಪಿಸಿ) ಹುದ್ದೆಗಳಿಗೆ ಸಂಬಂಧಿಸಿದಂತೆ ಕನ್ನಡ ಭಾಷಾ ಪರೀಕ್ಷಾ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 300 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಆದೇಶ ಹೊರಡಿಸಿದ್ದಾರೆ.
ಸೆಪ್ಟೆಂಬರ್ 14 ರಂದು ಮಧ್ಯಾಹ್ನ 2 ರಿಂದ 4 ಗಂಟೆಯ ವರೆಗೆ ಮತ್ತು ಸೆಪ್ಟೆಂಬರ್ 15 ರಂದು ಬೆಳಿಗ್ಗೆ 10 ರಿಂದ 11.30 ಗಂಟೆಯ ವರೆಗೆ ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ವರೆಗೆ ಪ್ರಸ್ತಾವನೆಯಲ್ಲಿ ವಿವರಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಮುತ್ತಲೂ 300 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಹಾಗೂ ಜೆರಾಕ್ಸ್ ಅಂಗಡಿಗಳು, ಪುಸ್ತಕ ಮಳಿಗೆಗಳನ್ನು ಷರತ್ತಿಗೊಳಪಟ್ಟು ತೆರೆಯುವುದನ್ನು ನಿಷೇಧಿಸಿ ಆದೇಶಿಸಿದೆ.
ಷರತ್ತುಗಳು: ಪರೀಕ್ಷಾ ಕೇಂದ್ರದ ಸುತ್ತಲೂ 300 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ ಮೊಬೈಲ್, ಪೇಜರ್, ಜಿರಾಕ್ಸ್, ಟೈಪಿಂಗ್, ಪುಸ್ತಕ ಮಳಿಗೆಗಳು ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ನಿಗದಿಪಡಿಸಿದ ಅಧಿಕಾರಿಗಳು, ಶಿಕ್ಷಕರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಗಿ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವದನ್ನು ನಿಷೇಧಿಸಲಾಗಿದೆ. 300 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.