ಯಾದಗಿರಿ: ಜಿಲ್ಲೆಯಲ್ಲಿ ಕಳೆದ ಬಾರಿ ಸಿಸಿಟಿವಿ ಕಣ್ಗಾವಲಿಯಲ್ಲಿ ಎಸ್‌ಎಸ್‌ಎಲ್‌ಸಿ ಮಕ್ಕಳು ಪರೀಕ್ಷೆ ಎದುರಿಸಿದ್ದರಿಂದ ಈ ಬಾರಿ ಆ ಭಯ ನಿವಾರಣೆಗೆ ಶಿಕ್ಷಣ ಇಲಾಖೆ ಮುಂದಾಗಿದೆ.
ಜಿಲ್ಲಾ ಮಟ್ಟದಲ್ಲಿ 40 ಅಂಕಗಳಿಗೆ ಏಕ ರೀತಿಯ ವೇಳಾಪಟ್ಟಿಯೊಂದಿಗೆ ಸಿಸಿಟಿವಿ ಕ್ಯಾಮೆರಾ ಅಡಿಯಲ್ಲಿ ಪರೀಕ್ಷೆ ಏರ್ಪಡಿಸಲಾಗಿದೆ. ಘಟಕ ಪರೀಕ್ಷೆಗಳನ್ನು ನಡೆಸಿ ಮೌಲ್ಯಮಾಪನ ಮಾಡಿ ವಿದ್ಯಾರ್ಥಿಗಳ ಪ್ರಗತಿಯನ್ನು ವಿಶ್ಲೇಷಿಸಲಾಗಿದೆ. ಲಭ್ಯವಿರುವ ಶಾಲೆಗಳಲ್ಲಿ ಎಲ್ಲಾ ಘಟಕ ಪರೀಕ್ಷೆಗಳನ್ನು ಸಿಸಿಟಿವಿ ವೀಕ್ಷಣೆಯಲ್ಲಿ ನಡೆಸಲಾಗಿದೆ.
2024ರ ಸೆಪ್ಟೆಂಬರ್ 23ರಿಂದ ಜಿಲ್ಲೆಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿದ್ಧತೆಯನ್ನು ವೆಬ್ ಕಾಸ್ಟಿಂಗ್ ಮೂಲಕ ಮಾಡಿ ವಾರ್ಷಿಕ ಪರೀಕ್ಷೆಯ ಭಯ ನಿವಾರಿಸಲು ಜಾಗೃತಿ ಮೂಡಿಸಲಾಗಿದೆ. ಇದರ ಜೊತೆಗೆ ನ್ಯಾ. ಶಿವರಾಜ್ ಪಾಟೀಲ ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಭಯ ಹಾಗೂ ಫಲಿತಾಂಶ ವೃದ್ಧಿಸುವ ನೇರ ಸಂವಾದ ಕಾರ್ಯಕ್ರಮ ನಡೆಸಲಾಗಿದೆ.
ಪ್ರತಿ ಘಟಕವಾರು ಕಲಿಕಾ ಬಲವರ್ಧನೆ ಅಭ್ಯಾಸ ಪುಸ್ತಕಗಳು, ಪ್ರಶ್ನೆ ಪತ್ರಿಕೆ ಅಭಿವೃದ್ಧಿ ಪಡಿಸುವುದು ಪ್ರತಿ ವಿದ್ಯಾರ್ಥಿಗಳಿಂದ ಪುಸ್ತಕಗಳು ಪ್ರಶ್ನೆ ಪತ್ರಿಕೆಗಳನ್ನು ತಯಾರಿಸುವ ಕಾರ್ಯ ನಡೆದಿದೆ. ಪ್ರತಿದಿನ ಮುಂಜಾನೆ ಅಥವಾ ಸಂಜೆ ವೇಳೆಯಲ್ಲಿ ವಿದ್ಯಾರ್ಥಿಗಳ ಅಭ್ಯಾಸ ಮಾಡುತ್ತಿರುವುದನ್ನು ಪರಿಶೀಲಿಸಲು ವಿದ್ಯಾರ್ಥಿಗಳ ದತ್ತು ಪಡೆದ ಶಿಕ್ಷಕರು ದೂರವಾಣಿ ಕರೆ ಮಾಡಿ ಅಭ್ಯಾಸ ಮಾಡುತ್ತಿರುವ ಬಗ್ಗೆ ಖಾತ್ರಿಪಡಿಸುವ ಕೆಲಸ ಜಿಲ್ಲೆಯಲ್ಲಿ ನಡೆಯುತ್ತಿದೆ.
‘ವಿದ್ಯಾರ್ಥಿಗಳ ಗುಂಪುಗಳ ರಚಿಸಿ ಪ್ರತಿ ಶಿಕ್ಷಕರಿಗೆ ಸಮಾನವಾಗಿ ವಿದ್ಯಾರ್ಥಿಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಪ್ರತಿ ವಿಷಯದಲ್ಲಿ 5 ಮಾದರಿ ಪ್ರಶ್ನೆ ಪತ್ರಿಕೆಗಳ ರಚಿಸಿ ಮಂಡಳಿಯ ವೆಬ್‌ಸೈಟ್‌ನಿಂದ ವಿದ್ಯಾರ್ಥಿಗಳ ಕಲಿಕೆಗೆ ಬಳಸಿಕೊಳ್ಳಲು ಮುಖ್ಯ ಶಿಕ್ಷಕರಿಗೆ ಮಾರ್ಗದರ್ಶನ ನೀಡಲಾಗಿದೆ. 10ನೇ ತರಗತಿಯ ಪ್ರತಿ ಘಟಕವಾರು ಪ್ರಶ್ನೆ ಕೋಠಿಗಳನ್ನು ಮಂಡಳಿಯ ವೆಬ್‌ಸೈಟ್‌ನಲ್ಲಿ ಶಿಕ್ಷಕರು ಪಡೆದು ವಿದ್ಯಾರ್ಥಿಗಳು ಮುಖ್ಯ ಗುರುಗಳಿಗೆ ಸಭೆಯಲ್ಲಿ ತಿಳಿಸಲಾಗಿದೆ’ ಎನ್ನುತ್ತವೆ ಶಿಕ್ಷಣ ಇಲಾಖೆ ಮೂಲಗಳು.
ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಭಯ ನಿವಾರಣೆಗೆ ಹಲವಾರು ಕ್ರಮ ಕೈಗೊಳ್ಳಲಾಗಿದೆ. ಇದರ ಭಾಗವಾಗಿ ವೆಬ್ ಕಾಸ್ಟಿಂಗ್ ಪರೀಕ್ಷೆ ಮಾಡಲಾಗಿದೆಸಿ.ಎಸ್.ಮುಜಧೋಳ ಡಿಡಿಪಿಐ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.