ADVERTISEMENT

ಅಬಕಾರಿ ದಾಳಿ: 14 ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 17:12 IST
Last Updated 4 ಏಪ್ರಿಲ್ 2020, 17:12 IST
ಬೆಂಗಳೂರು ಅಬಕಾರಿ ಆಯುಕ್ತರ ನಿರ್ದೇಶಾನುಸಾರ 800 ಲೀಟರ್ ಆಲ್ಕೋಹಾಲ್ ಬೇಸಡ್ ಸ್ಯಾನಿಟೈಜರ್‌ ಅನ್ನು ಜಿಲ್ಲಾಡಳಿತಕ್ಕೆ ನೀಡಲಾಯಿತು
ಬೆಂಗಳೂರು ಅಬಕಾರಿ ಆಯುಕ್ತರ ನಿರ್ದೇಶಾನುಸಾರ 800 ಲೀಟರ್ ಆಲ್ಕೋಹಾಲ್ ಬೇಸಡ್ ಸ್ಯಾನಿಟೈಜರ್‌ ಅನ್ನು ಜಿಲ್ಲಾಡಳಿತಕ್ಕೆ ನೀಡಲಾಯಿತು   

ಯಾದಗಿರಿ: ಜಿಲ್ಲೆಯಾದ್ಯಂತ ಅಬಕಾರಿ ಇಲಾಖೆ ದಾಳಿ ನಡೆಸಿ ಈವರೆಗೆ ಒಟ್ಟು 14 ಪ್ರಕರಣಗಳನ್ನು ದಾಖಲಿಸಿಕೊಂಡು ಸುಮಾರು ₹98,650 ಮೌಲ್ಯದ ಅಬಕಾರಿ ಪದಾರ್ಥಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತರ ಕಚೇರಿಯ ಪ್ರಭಾರಿ ಅಬಕಾರಿ ಉಪ ಅಧೀಕ್ಷಕ ಶ್ರೀರಾಮ ರಾಠೋಡ ತಿಳಿಸಿದ್ದಾರೆ.

ರಾಜ್ಯದಾದ್ಯಂತ ಕೊರೊನಾ ವೈರಸ್ (ಕೋವಿಡ್-19) ನಿಯಂತ್ರಿಸಲು ಅನುಕೂಲವಾಗುವಂತೆ ಸಂಪೂರ್ಣ ಲಾಕ್‍ಡೌನ್ ಪರಿಸ್ಥಿತಿ ಘೋಷಿಸಿದ ಪ್ರಯುಕ್ತ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಲಬುರ್ಗಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಎಸ್.ಕೆ.ಕುಮಾರ ಅವರ ಆದೇಶಾನುಸಾರ ಅಬಕಾರಿ ಉಪ ಆಯುಕ್ತ ಶಶಿಕಲಾ ಒಡೆಯರ್ ಅವರ ಮಾರ್ಗದರ್ಶನದಲ್ಲಿ ಶಹಾಪುರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ಮಹಮ್ಮದ್ ಇಸ್ಮಾಯಿಲ್ ಇನಾಮದಾರ ನೇತೃತ್ವದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ.

ಅಧಿಕಾರಿಗಳ ತಂಡದವರು ಒಟ್ಟು 14 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣಗಳಲ್ಲಿ ಈವರೆಗೆ ಜಿಲ್ಲೆಯಲ್ಲಿ 30,600 ಲೀಟರ್ ಮದ್ಯ, 9,120 ಲೀಟರ್ ಬೀಯರ್, 455 ಲೀಟರ್ ಸೇಂದಿ, 25 ಲೀಟರ್ ಕಳ್ಳಭಟ್ಟಿ ಸಾರಾಯಿ, 290 ಲೀಟರ್ ಬೆಲ್ಲದ ಕೊಳೆ, 20 ಕೆ.ಜಿ ಕೊಳೆತ ಬೆಲ್ಲ, 25 ಕೆ.ಜಿ ಸಿ.ಎಚ್ ಪೌಡರ್ ಮತ್ತು 8 ಕೆ.ಜಿ ಕಳ್ಳಭಟ್ಟಿ ಸಾರಾಯಿಗೆ ಬಳಸುವ ಗಿಡದ ಚಕ್ಕೆ ಸೇರಿದಂತೆ ಸುಮಾರು ₹98,650 ಮೌಲ್ಯದ ಅಬಕಾರಿ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ.

ADVERTISEMENT

ಅಬಕಾರಿ ನಿರೀಕ್ಷಕ ಪ್ರಕಾಶ ಮಾಕೊಂಡ, ಭೀಮಣ್ಣ ರಾಠೋಡ, ಶ್ರೀಶೈಲ್ ಒಡೆಯರ್, ಭಾರತಿ ಹಾಗೂ ಕೇದಾರನಾಥ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.