
ಯಾದಗಿರಿ: ಮದ್ಯದ ಅಂಗಡಿಗಳಿಗೆ ಅನುವತಿ ನೀಡಲು ಲಂಚ ಪಡೆಯುವುದರಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರೂ ಭಾಗಿಯಾಗಿದ್ದು, ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಮಹೇಶರೆಡ್ಡಿ ಮುದ್ನಾಳ ಹೇಳಿದ್ದಾರೆ.
ಅಬಕಾರಿ ಇಲಾಖೆಯು ಭ್ರಷ್ಟಾಚಾರದ ಕೂಪವಾಗಿದೆ. ಸಚಿವರ ಪುತ್ರ ಸಹ ಹಗರಣದಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ನಮ್ಮ ಪಕ್ಷದ ನಾಯಕರು ದಾಖಲೆಗಳನ್ನು ಬಹಿರಂಗ ಪಡಿಸಿದ್ದಾರೆ. ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಸಿಎಲ್ 2, ಸಿಎಲ್ 7 ಮತ್ತು ಸಿಎಲ್ 9 ಪರವಾನಗಿ ಪಡೆಯಲು ಸರ್ಕಾರಿ ಶುಲ್ಕ ಕಟ್ಟಿದ್ದರೂ, ಲಂಚದ ರೂಪದಲ್ಲಿ ಇಂತಿಷ್ಟು ಹಣ ಕೊಡವಂತೆ ಅಧಿಕಾರಿಗಳು ಒತ್ತಾಯ ಪೂರ್ವಕವಾಗಿ ವಸೂಲಿ ಮಾಡುತ್ತಿದ್ದಾರೆ. ಕಿರುಕುಳ ತಾಳದ ಲಕ್ಷ್ಮೀನಾರಾಯಣ ಎಂಬುವವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ. ಲಂಚ ಪಡೆಯುವಾಗ ಅಬಕಾರಿ ಅಧಿಕಾರಿಗಳು ಸಿಕ್ಕಿ ಬಿದ್ದರೂ ಸಚಿವರು ರಾಜೀನಾಮೆ ನೀಡದಿರುವುದು ಸರಿಯಲ್ಲ ಎಂದಿದ್ದಾರೆ.
ರಾಜ್ಯದ ಬಹುತೇಕ ಹಳ್ಳಿಗಳು, ತಾಂಡಾಗಳಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ನೂರಾರು ಕುಟುಂಬಗಳು ಬೀದಿಗೆ ಬರುತ್ತಿವೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.