
ಪ್ರಜಾವಾಣಿ ವಾರ್ತೆ
ಶಹಾಪುರ: ತಾಲ್ಲೂಕಿನ ಅರಳಳ್ಳಿ ಗ್ರಾಮದ ರೈತ ಶರಣಪ್ಪ ಸಂಗಣ್ಣ ಅಂಗರಗಿ (35) ಮಂಗಳವಾರ ಹಾವು ಕಚ್ಚಿದ್ದರಿಂದ ಸಾವನ್ನಪ್ಪಿದ್ದಾರೆ.
ಜಮೀನಿನಲ್ಲಿ ನೀರು ಬಿಡಲು ತೆರಳಿದ್ದಾಗ ಹಾವು ಕಚ್ಚಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖಂಡರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.