ಸೈದಾಪುರ: ಸಮೀಪದ ತುರಕನದೊಡ್ಡಿ ಗ್ರಾಮದ ರೈತ ಖತಲ ಅಹ್ಮದ್ (35) ಹಾವು ಕಚ್ಚಿದ್ದರಿಂದ ಶನಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ತಮ್ಮ ಜಮೀನಿನಲ್ಲಿ ಶೇಂಗಾ ಬೆಳೆಯನ್ನು ಕಾಯಲು ಹೋದಾಗ ಬೆಳಿಗ್ಗೆ 5ರ ಸುಮಾರು ಅವರ ಎಡಗೈಗೆ ಹಾವು ಕಚ್ಚಿದೆ. ಖಾಸಗಿ ವಾಹನದಲ್ಲಿ ರಾಯಚೂರು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.