ADVERTISEMENT

ಯಾದಗಿರಿ: ರೈತರು, ಕರವೇ ಕಾರ್ಯಕರ್ತರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 5:54 IST
Last Updated 28 ಸೆಪ್ಟೆಂಬರ್ 2020, 5:54 IST
ಯಾದಗಿರಿಯ ಗಾಂಧಿ ವೃತ್ತದ ಸಮೀಪ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ
ಯಾದಗಿರಿಯ ಗಾಂಧಿ ವೃತ್ತದ ಸಮೀಪ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ   

ಯಾದಗಿರಿ: ಎಪಿಎಂಸಿ ತಿದ್ದುಪಡಿ ಕಾಯಿದೆ, ಭೂಸುಧಾರಣಾ ತಿದ್ದುಪಡಿ ಕಾಯಿದೆ ಹಾಗೂ ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ರೈತರು, ಕರವೇ ಕಾರ್ಯಕರ್ತರು ನಗರದ ಸುಭಾಶ್ ಚಂದ್ರ ಬೋಸ್ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜನ ವಿರೋಧಿ, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು.‌ ಈ‌ ಮೂಲಕ ರೈತರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಮುಚ್ಚಿದ ಅಂಗಡಿ ಮುಂಗಟ್ಟುಗಳು: ನಗರದ ಪ್ರಮುಖ ವೃತ್ತಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ವ್ಯಾಪಾರಿಗಳು ಬಂದ್ ಮಾಡಿದ್ದಾರೆ. ತೆಗೆದಿದ್ದ ಅಂಗಡಿಗಳನ್ನು ಕಾರ್ಯಕರ್ತರು ಬಲವಂತವಾಗಿ ಮುಚ್ಚಿಸಿದರು.

ADVERTISEMENT

ಕರವೇ ನೇತೃತ್ವದಲ್ಲಿ ವಡಗೇರಾ ಕ್ರಾಸ್‌ನಿಂದ ನಗರಕ್ಕೆ ಬೈಕ್‌ಗಳ ರ್ಯಾಲಿ ನಡೆಸಿದರು. ನಂತರ ಗಾಂಧಿ ವೃತ್ತದಲ್ಲಿ ಜಮಾಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆಟೊ, ಬಸ್, ಬೈಕ್ ಸಂಚಾರ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.