ADVERTISEMENT

ರೈತರು ಭಾರತೀಯ ಆರ್ಥಿಕತೆಯ ಬೆನ್ನೆಲುಬು: ರಾಮನಗೌಡ ಪಾಟೀಲ

ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರ: ರಾಷ್ಟ್ರೀಯ ರೈತ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2025, 6:13 IST
Last Updated 29 ಡಿಸೆಂಬರ್ 2025, 6:13 IST
ಸುರಪುರ ತಾಲ್ಲೂಕಿನ ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಈಚೆಗೆ ಶ್ರೇಷ್ಠ ಕೃಷಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು
ಸುರಪುರ ತಾಲ್ಲೂಕಿನ ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಈಚೆಗೆ ಶ್ರೇಷ್ಠ ಕೃಷಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು   

ಸುರಪುರ: ‘ಭಾರತ ಮೂಲತಃ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು ಶೇ.70 ರಷ್ಟು ಜನ ಕೃಷಿಯನ್ನು ಅವಲಂಬಿಸಿದ್ದಾರೆ. ಕೃಷಿ ಈ ದೇಶದ ಸಂಸ್ಕೃತಿಯ ಪ್ರತೀಕ. ದೇಶದ ಜನತೆಯ ಹಸಿವು ನೀಗಿಸುವ ಅನ್ನದಾತನ ಕೊಡುಗೆ ಅಪಾರವಾಗಿದೆ’ ಎಂದು ಸಹಾಯಕ ಕೃಷಿ ನಿರ್ದೇಶಕ ರಾಮನಗೌಡ ಪಾಟೀಲ ಹೇಳಿದರು.

ತಾಲ್ಲೂಕಿನ ಕವಡಿಮಟ್ಟಿಯ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ತಾಲ್ಲೂಕು ಕೃಷಿಕ ಸಮಾಜ ಸುರಪುರ ಮತ್ತು ಹುಣಸಗಿ ಸಂಯುಕ್ತಾಶ್ರಯದಲ್ಲಿ ಈಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ರೈತ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ರೈತರು ಭಾರತೀಯ ಆರ್ಥಿಕತೆಯ ಬೆನ್ನೆಲುಬು ಮತ್ತು ಗ್ರಾಮೀಣ ಸಮೃದ್ಧಿಗೆ ಗಮನಾರ್ಹ ಕೊಡುಗೆ ನೀಡುವವರಾಗಿದ್ದಾರೆ. ರೈತ ಸಮುದಾಯ ವೈಜ್ಞಾನಿಕ ಮತ್ತು ತಂತ್ರಜ್ಞಾನ ಆಧಾರಿತ ಕೃಷಿ ಚಟುವಟಿಕೆಗಳನ್ನು ಅಳವಡಿಸಿಕೊಳ್ಳಬೇಕು. ಆಗ ಉತ್ಪಾದನೆ ಹೆಚ್ಚಾಗಿ ಆದಾಯ ದ್ವಿಗುಣವಾಗುತ್ತದೆ’ ಎಂದರು.

ADVERTISEMENT

ಬಿತ್ತುವ ಕುರಿಗೆ, ನೇಗಿಲು ಇತರ ಕೃಷಿ ಸಾಮಗ್ರಿಗಳಿಗೆ ಪೂಜೆ ಸಲ್ಲಿಸಲಾಯಿತು. ಬಳಿಕ ಐದು ಜನ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಹುಣಸಗಿ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ನಾಗಣ್ಣ ಸಾಹುಕಾರ ದಂಡಿನ್ ಉದ್ಘಾಟಿಸಿದರು. ಸುರಪುರ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಬಸವನಗೌಡ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು.

ಸಹಾಯಕ ಕೃಷಿ ನಿರ್ದೇಶಕರಾದ ಜೈಪ್ರಕಾಶ ನಾರಾಯಣ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಅಯ್ಯಣ್ಣ ಜಂಬಲದಿನ್ನಿ, ಸುರಪುರ ತಾಲ್ಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಅಮೃತಲಾಲ್ ಜೈನ್, ಎಪಿಎಂಸಿ ಮಾಜಿ ಸದಸ್ಯ ಮಲ್ಲಣ್ಣ ಸಾಹುಕಾರ ಮುಧೋಳ, ಜಿಲ್ಲಾ ಕೃಷಿಕ ಸಮಾಜದ ತಾಲ್ಲೂಕು ಪ್ರತಿನಿಧಿ ಸಿದ್ರಾಮರೆಡ್ಡಿ ಗೂಗಲ್ ವೇದಿಕೆಯಲ್ಲಿದ್ದರು.

ಕೃಷಿ ಅಧಿಕಾರಿಗಳಾದ ಶ್ರೀಧರ, ವಿನಾಯಕ, ದೀಪಾ ದೊರೆ ಕೊಡೇಕಲ್, ಎಲ್ಲಾ ರೈತ ಸಂರ್ಪಕ ಕೇಂದ್ರಗಳ ಕೃಷಿ ತಾಂತ್ರಿಕ ವ್ಯವಸ್ಥಾಪಕರು, ಕೃಷಿ ಸಖಿಯರು, ರೈತರು ಭಾಗವಹಿಸಿದ್ದರು. ಹುಣಸಗಿ ಕೃಷಿ ಅಧಿಕಾರಿ ಸಿದ್ಧಾರ್ಥ ಪಾಟೀಲ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.