ADVERTISEMENT

ಯಾದಗಿರಿ | ಖರೀದಿಯ ಖಾತರಿ ನೀಡಲು ರೈತರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 5:51 IST
Last Updated 12 ಜನವರಿ 2022, 5:51 IST
ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಅಶೋಕ ಸುರಪುರಕರ್ ಅವರಿಗೆ ಮನವಿ ಸಲ್ಲಿಸಿದರು
ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆ ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಅಶೋಕ ಸುರಪುರಕರ್ ಅವರಿಗೆ ಮನವಿ ಸಲ್ಲಿಸಿದರು   

ಹುಣಸಗಿ: ರೈತರ ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸುವಂತೆರಾಷ್ಟ್ರಪತಿಗಳು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಭಾರತೀಯ ಕಿಸಾನ್ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಭೀಮನಗೌಡ ದದ್ದಲ್ ಮನವಿ ಮಾಡಿದರು.

ಸಂಘಟನೆ ವತಿಯಿಂದ ತಹಶೀಲ್ದಾರ್ ಕಚೇರಿಯ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ, ಬಳಿಕ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿವೆ. ರೈಲ್ವೆ, ರಸ್ತೆ, ವಿದ್ಯುನ್ಮಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮಹತ್ವರದ ಸಾಧನೆ ಮಾಡಲಾಗಿದೆ. ಆದರೆ, ದೇಶ ವಾಸಗಳಿಗೆ ಆಹಾರ ಒದಗಿಸುವ ಕೃಷಿ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಇದರಿಂದ ರೈತರ ಸ್ಥಿತಿ ಚಿಂತಾಜನಕವಾಗಿದೆ ಎಂದರು.

ADVERTISEMENT

ಬೇರೆ ಕ್ಷೇತ್ರಗಳ ಉತ್ಪಾದಕರು ತಮ್ಮ ಉತ್ಪನ್ನಗಳಿಗೆ ತಾವೇ ದರ ನಿಗದಿ ಮಾಡಿಕೊಳ್ಳುತ್ತಾರೆ. ಆದರೆ, ರೈತರಿಗೆ ಮಾತ್ರ ಆ ಅವಕಾಶ ಇಲ್ಲ. ಇದರಿಂದ ಬಹುತೇಕ ಲಾಭಾಂಶ ಮಧ್ಯವರ್ತಿಗಳ ಪಾಲಾಗುತ್ತಿದೆ ಎಂದು ಹೇಳಿದರು.

ಸಂಘದ ಹಿರಿಯ ಮುಖಂಡರಾದ ಮನೋಹರರಾವ್ ದ್ಯಾಮನಹಾಳ, ಮಲ್ಲನಗೌಡ ಮೇಟಿ ಕಾಮನಟಗಿ ಮಾತನಾಡಿ, ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಲೆ ಘೋಷಿಸಿ, ಖರೀದಿಯ ಖಾತರಿ ನೀಡಬೇಕು. ಘೋಷಿತ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿ ಆಗಬಾರದು. ಪ್ರತಿ ವರ್ಷ ಬೆಲೆ ಘೋಷಣೆಯು ಹಣದುಬ್ಬರ ದರಕ್ಕೆ ಅನುಗುಣವಾಗಿ ಇರಬೇಕು. ಸರ್ಕಾರ ದರ ನಿಗದಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರಪತಿಗಳಿಗೆ ಬರೆದ ಮನವಿಪತ್ರವನ್ನು ಹುಣಸಗಿ ತಹಶೀಲ್ದಾರ್ ಅಶೋಕಕುಮಾರ್ ಸುರಪುರಕರ್ ಅವರಿಗೆ ಸಲ್ಲಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ.ದೇಸಾಯಿ, ಹಣಮಂತ್ರಾಯ ಕಟ್ಟಿಮನಿ, ರವಿ ಕುಲಕರ್ಣಿ, ಪ್ರಭು ನೀಲಗಾರ್, ಮಲ್ಲಿಕಾರ್ಜುನ ಬಿರಾದಾರ, ಹಣಮಂತ್ರಾಯಗೌಡ ಕುಪ್ಪಿ, ಶಿವಣ್ಣ ಮೇಟಿ ಹುಣಸಗಿ, ಮಲ್ಲು ಮ್ಯಾಗೇರಿ, ಸಿದ್ಧನಗೌಡ ಗುಳಬಾಳ, ಬಸವರಾಜ ಕೊಡೇಕಲ್ಲ, ಗ್ಯಾನಪ್ಪ ಕಾಮನಟಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.