ADVERTISEMENT

ಬಣಜಿಗ ಸಮಾಜದವರು ಒಗ್ಗಟ್ಟಾಗಿ: ವೀರೇಶ್ವರ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 3:37 IST
Last Updated 4 ಮಾರ್ಚ್ 2021, 3:37 IST
ಯಾದಗಿರಿಯಲ್ಲಿ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕದಿಂದ ಸಮಾಜದ ಚುನಾಯಿತ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲಾಯಿತು
ಯಾದಗಿರಿಯಲ್ಲಿ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕದಿಂದ ಸಮಾಜದ ಚುನಾಯಿತ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನಿಸಲಾಯಿತು   

ಯಾದಗಿರಿ: ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘ ಜಿಲ್ಲಾ ಘಟಕದಿಂದ ನಗರದ ಚಂದ್ರಭಾಗ ಕಲ್ಯಾಣ ಮಂಟಪದಲ್ಲಿ ಸಮಾಜದ ಚುನಾಯಿತ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಹಾಗೂ ಸದಸ್ಯತ್ವ ಪಡೆದ ಸದಸ್ಯರಿಗೆ ಗುರುತಿನ ಚೀಟಿ ವಿತರಿಸಲಾಯಿತು.

‘ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜವರು ಸಂಘಟಿತರಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು’ ದಾಸಬಾಳ ಮಠದ ವೀರೇಶ್ವರ ಸ್ವಾಮೀಜಿ ಹೇಳಿದರು.

ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ ಮಾತನಾಡಿ, ‘ನಗರದಲ್ಲಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆಗೆ ಈಗಾಗಲೇ ₹ 25 ಲಕ್ಷ ಮೀಸಲಿಡಲಾಗಿದ್ದು, ಶಾಸಕ ವೆಂಕಟರೆಡ್ಡಿ ಮುದ್ನಾಳ ಹಾಗೂ ಸಮಾಜದ ಮುಖಂಡರೊಂದಿಗೆ ಚರ್ಚಿಸಿ ಮೂರ್ತಿ ಪ್ರತಿಷ್ಠಾಪನೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ’ ನೀಡಿದರು.

ADVERTISEMENT

ಅಖಿಲ ಭಾರತ ವೀರಶೈವ ಸಮಾಜದ ಯುವ ಘಟಕದ ಅಧ್ಯಕ್ಷ ಅವಿನಾಶ ಮಾತನಾಡಿ, ಬಣಜಿಗ ಸಮಾಜದ ವೀರಶೈವ ಲಿಂಗಾಯಿತ ಸಮಾಜದ ಒಳಪಂಗಡದ ಒಂದು ಭಾಗವಾಗಿದ್ದು, ನಾವೆಲ್ಲರೂ ಒಂದು ಕುಟುಂಬದ ಏಳಿಗೆಯ ಜೊತೆ ಜೊತೆಯಲ್ಲಿ ಸಮಗ್ರ ವೀರಶೈವ ಸಮಾಜದ ಬೆಳವಣಿಗೆಗೆ ಶ್ರಮಿಸಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಹಂಗಾಮಿ ರಾಜ್ಯ ಅಧ್ಯಕ್ಷ ಶಿವಬಸಪ್ಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ನಗರದಲ್ಲಿ ಬಣಜಿಗ ಭವನ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

ಬಣಜಿಗ ಸಮಾಜದ ಜಿಲ್ಲಾ ಉಪಾಧ್ಯಕ್ಷ ವೀರಣ್ಣ ರ್‍ಯಾಖಾ ಮಾತನಾಡಿದರು. ಸಂಘದ ಜಿಲ್ಲಾಧ್ಯಕ್ಷ ಸಂಗಪ್ಪ ಲಾಳಸಂಗಿ ಅಧ್ಯಕ್ಷತೆ ವಹಿಸಿದ್ದರು. ಡಾ.ಸುಭಾಷ ಕರಣಗಿ, ವಡಗೇರಿ ತಾಲ್ಲೂಕು ಅಧ್ಯಕ್ಷ ಬಸವರಾಜ ಸೊನ್ನದ, ಶೇಖರ ರ್‍ಯಾಖಾ, ಇಂಧುದರ ಸಿನ್ನೂರ, ಅಶೋಕ ಕೆಂಭಾವಿ ಡಾ. ಜಗದೀಶ ನೂಲಿನವರ, ಬಸವರಾಜ ರಾಜಾಪುರ ಇದ್ದರು.

ಇದೇ ವೇಳೆ ಸಮಾಜದ ಚುನಾಯಿತ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.