ADVERTISEMENT

ಸುರಪುರ: ಕೆಪಿಎಸ್ ಶಾಲೆಯಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 6:04 IST
Last Updated 30 ಅಕ್ಟೋಬರ್ 2025, 6:04 IST
ಸುರಪುರ ಸಮೀಪದ ರಂಗಂಪೇಟೆಯ ಕೆಪಿಎಸ್ ಶಾಲೆಯಲ್ಲಿ ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ
ಸುರಪುರ ಸಮೀಪದ ರಂಗಂಪೇಟೆಯ ಕೆಪಿಎಸ್ ಶಾಲೆಯಲ್ಲಿ ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ   

ಸುರಪುರ: ಸಮೀಪದ ರಂಗಂಪೇಟೆಯ ಕೆಪಿಎಸ್ ಶಾಲೆಯಲ್ಲಿ ಬುಧವಾರ ಬೆಳಿಗ್ಗೆ 7.30ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡು ಶಾಲೆಯಲ್ಲಿದ್ದ ಅಪಾರ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.

ಶಾಲೆಯ ಪದವಿಪೂರ್ವ ವಿಭಾಗದ ಪ್ರಾಂಶುಪಾಲ ಕೊಠಡಿಯಲ್ಲಿ ಬೆಳಿಗ್ಗೆ ಬೆಂಕಿ ಆವರಿಸಿ ಹೊಗೆ ಬರುತ್ತಿರುವುದನ್ನು ಶಾಲೆಯ ಹತ್ತಿರದ ಮನೆಯವರು ಹಾಗೂ ಸುತ್ತಮುತ್ತಲಿನ ಜನರು ನೋಡಿ ತಕ್ಷಣ ಅಗ್ನಿಶಾಮಕ ದಳದವರಿಗೆ ಹಾಗೂ ಶಾಲೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಪ್ರಾಂಶುಪಾಲ ಕೊಠಡಿಯಲ್ಲಿಯ ಸ್ಕ್ಯಾನರ್ ಪ್ರಿಂಟರ್, ಎಚ್‍ಪಿ ಪ್ರಿಂಟರ್, ಕಂಪ್ಯೂಟರ್, ಸಿಸಿ ಕ್ಯಾಮರಾ ಮಾನಿಟರ್, ಸಿಸಿಟಿವಿ ವಸ್ತುಗಳು ಇನ್ನಿತರ ವಸ್ತುಗಳು ಸುಟ್ಟಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಶಾಲೆಯವರು ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ಎಸ್‍ಡಿಎಂಸಿ ಅಧ್ಯಕ್ಷ ನಾಸೀರ್ ಕುಂಡಾಲೆ, ಸದಸ್ಯರು ಹಾಗೂ ಶಾಲೆ ಮುಖ್ಯ ಶಿಕ್ಷಕ, ಶಿಕ್ಷಕರು ಇದ್ದರು. ಸರಿಯಾದ ಸಮಯಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದರಿಂದ ಹೆಚ್ಚಿನ ಅನಾಹುತಗಳು ತಪ್ಪಿದಂತಾಗಿದೆ ಎಂದು ಸಾರ್ವಜನಿಕರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.