ADVERTISEMENT

5 ವ್ಯಕ್ತಿಗಳ ಕೊರೊನಾ ಪರೀಕ್ಷೆ ವರದಿ ನೆಗೆಟಿವ್

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 14:19 IST
Last Updated 30 ಮಾರ್ಚ್ 2020, 14:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಯಾದಗಿರಿ: ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪರೀಕ್ಷೆ ಮಾಡಲು ಕಳುಹಿಸಿದ ಒಟ್ಟು 5 ವ್ಯಕ್ತಿಗಳ ಮಾದರಿಗಳಲ್ಲಿ ಎಲ್ಲಾ ನೆಗೆಟಿವ್ ಬಂದಿವೆ. ಸೋಮವಾರ ಮತ್ತೊಂದು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾದಗಿರಿ ತಾಲ್ಲೂಕಿನಲ್ಲಿ 29, ಶಹಾಪುರ ತಾಲ್ಲೂಕಿನಲ್ಲಿ 19 ಹಾಗೂ ಸುರಪುರ ತಾಲ್ಲೂಕಿನಲ್ಲಿ 22 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 70 ಜನ ದುಬೈ, ಕತಾರ, ಸೌದಿ, ಮದಿನಾ ಪ್ರವಾಸದಿಂದ ಜಿಲ್ಲೆಗೆ ಮರಳಿ ಬಂದಿರುವ ಹಿನ್ನೆಲೆಯಲ್ಲಿ ಇವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ರೋಗಲಕ್ಷಣಗಳು ಕಂಡುಬಂದಿರುವುದಿಲ್ಲ. ಆ ಕಾರಣ ಇವರಿಗೆ ಹೋಮ್ ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಈ ಪೈಕಿ 5 ಜನ 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಿದ ಒಬ್ಬರನ್ನು ಸೋಮವಾರ ಬಿಡುಗಡೆ ಮಾಡಲಾಗಿದ್ದು, ಮತ್ತೊಬ್ಬರನ್ನು ಹೊಸದಾಗಿ ಇದೇ ಆಸ್ಪತ್ರೆಗೆ ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಸುರಪುರ ಆಸ್ಪತ್ರೆಯಲ್ಲಿ ಒಬ್ಬರನ್ನು ಪ್ರತ್ಯೇಕವಾಗಿರಿಸಿ, ಐಸೊಲೇಷನ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಶಂಕಿತ ಅಥವಾ ಖಚಿತ ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿರುವುದಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.