ADVERTISEMENT

ಪ್ರವಾಹ: ಮುನ್ನಚ್ಚರಿಕೆ ವಹಿಸಲು ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 16:58 IST
Last Updated 15 ಅಕ್ಟೋಬರ್ 2020, 16:58 IST

ಯಾದಗಿರಿ: ಭೀಮಾ ನದಿಯಲ್ಲಿ ಸೊನ್ನ ಬ್ಯಾರೇಜ್‍ದಿಂದ ಸುಮಾರು 3.40 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇರುವುದರಿಂದ ಭೀಮಾ ನದಿ ತೀರದ ಗ್ರಾಮಗಳ ಜನರು ತಮ್ಮ ಜಾನುವಾರುಗಳನ್ನು ನದಿ ತೀರಕ್ಕೆ ಬಿಡಬಾರದು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್, ತಿಳಿಸಿದ್ದಾರೆ.

ಯಾವುದೇ ತುರ್ತು ಸಂದರ್ಭಗಳನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು ಜನರು ಯಾವುದೇ ಆತಂಕ ಪಡುವ ಅಗತ್ಯವಿರುವುದಿಲ್ಲ ಎಂದು ಹೇಳಿದ್ದಾರೆ.

ಯಾವುದೇ ತುರ್ತು ಸಂದರ್ಭದಲ್ಲಿ ನದಿ ಪಾತ್ರ ಹಾಗೂ ಹಳ್ಳಗಳ ಕಡೆಗೆ ಜನ ಮತ್ತು ಜಾನುವಾರುಗಳು ಹೋಗದಂತೆ ಎಚ್ಚರವಹಿಸಬೇಕು. ಈಗಾಗಲೇ ಮುಂಜಾಗ್ರತ ಕ್ರಮವಾಗಿ ಗ್ರಾಮ ಪಂಚಾಯಿತಿ ಮೂಲಕ ಡಂಗೂರ ಸಾರಿಸಲಾಗಿದೆ. ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ಸಹಾಯವಾಣಿ 08473-253771 ಸಂಖ್ಯೆಗೆ ಕರೆ ಮಾಡುವಂತೆ ಸಾರ್ವಜನಿಕರಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.