ADVERTISEMENT

ಕೃಷ್ಣೆಗೆ ಪ್ರವಾಹ ಸ್ಥಿತಿ; 1.35 ಲಕ್ಷ ಕ್ಯುಸೆಕ್ ನೀರು ನದಿಗೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 6:28 IST
Last Updated 23 ಜುಲೈ 2021, 6:28 IST
ಹುಣಸಗಿ ತಾಲ್ಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ 22 ಗೇಟ್‌ಗಳ ಮುಖಾಂತರ 1.35 ಲಕ್ಷ ಕ್ಯುಸೆಕ್ ನೀರನ್ನು ಹರಿಬಿಡಲಾಯಿತು
ಹುಣಸಗಿ ತಾಲ್ಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ 22 ಗೇಟ್‌ಗಳ ಮುಖಾಂತರ 1.35 ಲಕ್ಷ ಕ್ಯುಸೆಕ್ ನೀರನ್ನು ಹರಿಬಿಡಲಾಯಿತು   

ಹುಣಸಗಿ: ಕಳೆದ ಒಂದು ವಾರದಿಂದಲೂ ಕೃಷ್ಣಾ ನದಿ ಪಾತ್ರದಲ್ಲಿ ಮಳೆಯಾಗುತ್ತಿದ್ದರಿಂದಾಗಿ ನಾರಾಯಣಪುರ ಬಸವಸಾಗರಕ್ಕೆ ಒಳಹರಿವು ಹೆಚ್ಚುತ್ತಲಿದ್ದು, ಬುಧವಾರದಿಂದ ಇನ್ನೂ ಅಧಿಕ ಪ್ರಮಾಣದಲ್ಲಿ ಹರಿದು ಬರುತ್ತಿದೆ.

ಇದರಿಂದಾಗಿ ಕೃಷ್ಣಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಬುಧವಾರ ಬೆಳಿಗ್ಗೆ 85 ಸಾವಿರ ಇದ್ದ ಒಳಹರಿವು ಗುರುವಾರ ಬೆಳಿಗ್ಗೆ ಹೊತ್ತಿಗೆ 95 ಸಾವಿರಕ್ಕೆ ಏರಿಕೆಯಗಿತ್ತು. ಸಂಜೆ 6 ಗಂಟೆಗೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಇದರಿಂದಾಗಿ ಜಲಾಶಯದ ಮಟ್ಟ 491.28 ಕಾಯ್ದುಕೊಂಡು 22 ಗೇಟ್‌ಗಳ ಮುಖಾಂತರ 1.35 ಲಕ್ಷ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ ಎಂದು ಡ್ಯಾಂ ಡಿವಿಜನ್ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ್ ನಾಯ್ಕೋಡಿ ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಕೃಷ್ಣಾ ನದಿಗೆ ಯಾವುದೇ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ನೀರನ್ನು ಹರಿಸುವ ಸಾಧ್ಯತೆ ಇದ್ದು, ಕೃಷ್ಣಾ ನದಿ ಪಾತ್ರದಲ್ಲಿರುವ ಗ್ರಾಮಗಳ ಜನರು ನದಿಯತ್ತ ತೆರಳಬಾರದು ಹಾಗೂ ಜನ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ
ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.