ಮಂಜುಳಾ ಗೂಳಿ
ಯಾದಗಿರಿ: ನಗರದ ಕನಕ ವೃತ್ತದ ಸಮೀಪದ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡದ ಬಾಗಿಲು ಮತ್ತು ಕಿಟಕಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಪಕ಼ದಿಂದ ಉಚ್ಚಾಟಿಸಲಾಗಿದೆ.
ಆರೋಪಿಗಳಲ್ಲಿ ಒಬ್ಬರಾಗಿರುವ ಈಗ ಬಂಧನದಲ್ಲಿರುವ ಉಪನ್ಯಾಸಕ ಶಂಕರ ಗೂಳಿ ಅವರ ಪತ್ನಿ ಮಂಜುಳಾ ಗೂಳಿ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.
ಹಲವು ವರ್ಷಗಳಿಂದ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಮಂಜುಳಾ ಗೂಳಿ ಅವರ ಸ್ಥಾನಕ್ಕೆ ನಿಲೋಫರ್ ಬಾದಲ್ ಅವರನ್ನು ನೇಮಿಸಲಾಗಿತ್ತು. ಇದರಿಂದ ಆಕ್ರೋಶಗೊಂಡ ಅವರ ಪತಿ ಶಂಕರ ಜಿಲ್ಲಾ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಬೆಂಕಿ ಹಚ್ಚಿದ್ದರು.
ಇನ್ನೊಬ್ಬ ಆರೋಪಿ ಬಾಬುಗೌಡ ಆಗತೀರ್ಥ ಎಂಬುವವರು ನಾಪತ್ತೆಯಾಗಿದ್ದು, ಅವರ ಬಂಧನಕ್ಕೆ ಜಾಲ ಬೀಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.