
ಸೈದಾಪುರ: ‘ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ವಿವಿಧ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿದ್ದು ಅವುಗಳ ಸರಿಯಾದ ಸದುಪಯೋಗ ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು’ ಎಂದು ಎಸ್‍ಎಸ್‍ಡಿಎಂಸಿ ಅಧ್ಯಕ್ಷ ಅಲ್ಲಾಭಾಷಾ ಹಿಚಗೇರಿ ಹೇಳಿದರು.
ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಶೂ ಹಾಗೂ ಸಾಕ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಿ ಮಾತನಾಡಿದರು.
ಸರ್ಕಾರ ಮಕ್ಕಳ ಶೈಕ್ಷಣಿಕ ಏಳಿಗೆಗಾಗಿ ಸಾಕಷ್ಟು ಯೋಜನೆಗಳನ್ನು ಪ್ರಾರಂಭಿಸಿದೆ. ಅವುಗಳನ್ನು ದಾಖಲಾತಿಗೆ ತಕ್ಕಂತೆ ಶಾಲೆಗೆ ಹಾಜರಾಗಬೇಕು. ಈ ದಿಸೆಯಲ್ಲಿ ಪೋಷಕರು ಮಕ್ಕಳಿಗೆ ಶಿಕ್ಷಣದ ಬಗಗೆ ಹೆಚ್ಚಿನ ಕಾಳಜಿ ವಹಿಸುವುದರ ಮೂಲಕ ಗುಣಾತ್ಮಕ ಶಿಕ್ಷಣಕ್ಕೆ ಪ್ರಯತ್ನ ಮಾಡಿದಾಗ ಮಾತ್ರ ಉತ್ತಮ ಸಾಧನೆ ನಮ್ಮದಾಗುತ್ತದೆ. ನಾವೆಲ್ಲರೂ ಇದಕ್ಕಾಗಿ ಹೆಚ್ಚಿನ ಮಹತ್ವ ನೀಡಬೇಕು ಎಂದು ಕಿವಿ ಮಾತುಗಳನ್ನು ಹೇಳಿದರು.
ಈ ಸಂದರ್ಭದಲ್ಲಿ ಎಸ್‍ಡಿಎಂಸಿ ಉಪಾಧ್ಯಕ್ಷ ಗಪೂರ ಕುರೆಸಿ, ಮುಖ್ಯಶಿಕ್ಷಕ ಪರಕುಂದ ಬೇಗಂ, ಶಿಕ್ಷಕರಾದ ಖಾಜಾ ಬೇಗಂ, ಹಸಿನ ಬಾನು, ವಿದ್ಯಾರ್ಥಿಗಳು ಸೇರಿದಂತೆ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.