ADVERTISEMENT

ಸೈದಾಪುರ: ಉಚಿತ ದಂತ ಆರೋಗ್ಯ ಶಿಬಿರ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2023, 13:57 IST
Last Updated 24 ಆಗಸ್ಟ್ 2023, 13:57 IST
ಸೈದಾಪುರ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ದಂತ ಶಿಬಿರದಲ್ಲಿ ವೈದ್ಯಾಧಿಕಾರಿ ಡಾ.ಮಹೇಶ ಸಜ್ಜನ್ ಮಾತನಾಡಿದರು
ಸೈದಾಪುರ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ದಂತ ಶಿಬಿರದಲ್ಲಿ ವೈದ್ಯಾಧಿಕಾರಿ ಡಾ.ಮಹೇಶ ಸಜ್ಜನ್ ಮಾತನಾಡಿದರು   

ಸೈದಾಪುರ: ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ಬಾಯಿಯ ಆರೋಗ್ಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ದಂತ ವೈದ್ಯಾಧಿಕಾರಿ ಡಾ.ಮಹೇಶ ಸಜ್ಜನ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಹಾಗೂ ಸ್ನೇಹ ಕ್ಲಿನಿಕ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಉಚಿತ ದಂತ ತಪಾಸಣೆ ಶಿಬಿರದಲ್ಲಿ ಮಾತನಾಡಿದರು.

ಹಲ್ಲುಗಳ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ ಸೊಪ್ಪು, ತರಕಾರಿ, ಹಣ್ಣು, ರಾಗಿ ಮುದ್ದೆಯಂತಹ ಖನಿಜಯುಕ್ತ ಆಹಾರ ಸೇವಿಸುವುದರಿಂದ ಹಲ್ಲುಗಳ ರಕ್ಷಣೆ ಆಗುತ್ತದೆ. ಮಕ್ಕಳಿಗೆ, ಪೌಷ್ಟಿಕ ಆಹಾರ ಸೇವನೆ, ರಕ್ತಹೀನತೆ ನಿಯಂತ್ರಣ, ದುಶ್ಚಟಗಳ ನಿಯಂತ್ರಣ, ವೈಯಕ್ತಿಕ ಸ್ವಚ್ಛತೆ, ಆರೋಗ್ಯ ಕಾಪಾಡಿಕೊಳ್ಳುವುದು, ಸ್ನೇಹಾ ಕ್ಲಿನಿಕ್ ಒಳಗೊಂಡ ವಿಷಯದ ಬಗ್ಗೆ ಮಕ್ಕಳಿಗೆ ಸಲಹೆ ಕೊಡಲಾಯಿತು. ಪ್ರತಿಯೊಬ್ಬರು ಪ್ರತ್ಯೇಕ ಬ್ರಷ್‌ನಲ್ಲಿ ಹಲ್ಲು ಉಜ್ಜುವ ಅಭ್ಯಾಸ ಇಟ್ಟುಕೊಳ್ಳಬೇಕು. ಯಾವುದೇ ಆಹಾರ ಪದಾರ್ಥ ಸೇವಿಸಿದ ಮೇಲೆ ನೀರಿನಲ್ಲಿ ಬಾಯಿ ಮುಕ್ಕಳಿಸಬೇಕು. ಹಲ್ಲು ಉಜ್ಜುವಾಗ ವಸಡಿನಲ್ಲಿ ರಕ್ತಸ್ರಾವವಾಗುತ್ತಿದ್ದರೆ ವೈದ್ಯರ ಸಲಹೆ ಪಡೆದುಕೊಳ್ಳಬೇಕು. ಬೆಳಿಗ್ಗೆ ಮತ್ತು ರಾತ್ರಿ ತಪ್ಪದೆ ಬ್ರಷ್ ಮಾಡಬೇಕು ಎಂದರು.

ADVERTISEMENT

ಸೈದಾಪುರ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಉಮಾದೇವಿ, ಮುಖ್ಯಶಿಕ್ಷಕ ಈರಣ್ಣ, ದಂತ ವೈದ್ಯರುಗಳಾದ ಡಾ.ಫಾಹಿಮಿದ್‌ ಸುಲ್ತಾನ್, ಶೃತಿ, ಅನಿತಾ ಪೂಜಾರಿ, ರಾಣೋಜಿ ಪಿ ನಾಡಗೇರಾ, ಶಿವಶಂಕರ್ ರೆಡ್ಡಿ ಹಾಗೂ ಶಿಕ್ಷಕರು, ಸಿಬ್ಬಂದಿ ಭಾಗವಹಿಸಿದ್ದರು.

ಸೈದಾಪುರ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ದಂತ ತಪಾಸಣೆ ಮಾಡಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.